ಗದಗ : ಶುಲ್ಕ ಪಾವತಿಸಿ ಸರ್ಕಾರ ಕೊಟ್ಟಿರುವ ಪಠ್ಯಪುಸ್ತಕ ತೆಗೆದುಕೊಂಡು ಹೋಗಿ ಅಂತ ಖಾಸಗಿ ಶಾಲಾ ಶಿಕ್ಷಣ ಸಂಸ್ಥೆಗಳು ಒತ್ತಡ ಹೇರುತ್ತಿವೆ ಎಂದು ಪಾಲಕರು ಆರೋಪಿಸಿದ್ದಾರೆ.
ಗದಗ ಕ್ಷೇತ್ರ ಶಿಕ್ಷಣ ಅಧಿಕಾರಿಗಳ ಕಚೇರಿ ಮುಂದೆ ಜಮಾಯಿಸಿ, ಪ್ರತಿಭಟನೆ ನಡಸಿದರು. ಆದರೆ ಅಧಿಕಾರಿಗಳು ಕಚೇರಿಗೆ ಬೀಗ ಹಾಕಿಕೊಂಡು ಹೋಗಿದ್ದದರಿಂದ ಪಾಲಕರು ಕಚೇರಿ ಎದುರು ಪರದಾಡುವಂತಾಯಿತು.
ಸರ್ಕಾರದ ಆದೇಶಕ್ಕೆ ಕ್ಯಾರೆ ಎನ್ನದ ಖಾಸಗಿ ಶಾಲೆಗಳು ಶುಲ್ಕ ಪಾವತಿಸುವಂತೆ ಒತ್ತಾಯ ಮಾಡುತ್ತಿವೆ. ಇವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.