ETV Bharat / state

ಗದಗ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ; 18 ಹುದ್ದೆಗಳಿಗೆ ಅರ್ಜಿ ಆಹ್ವಾನ - ಸರ್ಕಾರಿ ಉದ್ಯೋಗ ಮಾಹಿತಿಗಳು

ಸ್ಟೆನೋಗ್ರಾಫರ್​, ಜವಾನ, ಟೈಪಿಸ್ಟ್​​ ಸೇರಿದಂತೆ ಒಟ್ಟು 18 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ

Peon and Stenographer job notification form Gadag District Court

author img

By ETV Bharat Karnataka Team

Published : Dec 6, 2023, 2:24 PM IST

ಬೆಂಗಳೂರು: ಗದಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಸ್ಟೆನೋಗ್ರಾಫರ್​, ಜವಾನ, ಟೈಪಿಸ್ಟ್​​ ಸೇರಿದಂತೆ ಒಟ್ಟು 18 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅಧಿಸೂಚನೆ
ಅಧಿಸೂಚನೆ

ಹುದ್ದೆ ವಿವರ: ಗದಗ ಜಿಲ್ಲಾ ನ್ಯಾಯಾಲಯದಿಂದ ಅರ್ಜಿ ಆಹ್ವಾನಿಸಲಾದ ಹುದ್ದೆಗಳ ವಿವರ ಇಂತಿದೆ.

  • ಶೀಘ್ರ ಲಿಪಿಗಾರ 2
  • ಟೈಪಿಸ್ಟ್​​ 3
  • ಟೈಪಿಸ್ಟ್​​- ಕಾಪಿಸ್ಟ್​​ 3
  • ಜವಾನ 10

ವಿದ್ಯಾರ್ಹತೆ:

  • ಶೀಘ್ರ ಲಿಪಿಗಾರ / ಬೆರಳಚ್ಚುಗಾರ : ಪಿಯುಸಿ ಅಥವಾ ಕಮರ್ಷಿಯಲ್​ ಪ್ರಾಕ್ಟಿಸ್​ನಲ್ಲಿ 3 ವರ್ಷದ ಡಿಪ್ಲೊಮಾ ಪದವಿಯನ್ನು ಹೊಂದಿರಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಮತ್ತು ಇಂಗ್ಲಿಷ್​ ಭಾಷೆಯ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
  • ಟೆಪಿಸ್ಟ್​​- ಕಾಪಿಸ್ಟ್​​: ಪಿಯುಸಿ ಅಥವಾ ಕಮರ್ಷಿಯಲ್​ ಪ್ರಾಕ್ಟಿಸ್​ನಲ್ಲಿ 3 ವರ್ಷದ ಡಿಪ್ಲೊಮಾ ಪದವಿಯನ್ನು ಹೊಂದಿರಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕಿರಿಯ ಕನ್ನಡ ಮತ್ತು ಇಂಗ್ಲಿಷ್​ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರರ್ಣರಾಗಿರಬೇಕು.
  • ಜವಾನ: 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ವರ್ಷ ಆಗಿದ್ದು, ಗರಿಷ್ಠ ವಯೋಮಿತಿ 35 ವರ್ಷ ಆಗಿದೆ. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ. ಉಳಿದ ಅಭ್ಯರ್ಥಿಗಳು 100 ರೂ ಅರ್ಜಿ ಶುಲ್ಕ ಪಾವತಿಸಬೇಕಾಗಿದೆ.

ಆಯ್ಕೆ ವಿಧಾನ: ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು

ಈ ಹುದ್ದೆಗೆ ನವೆಂಬರ್​ 29ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಡಿಸೆಂಬರ್​ 28 ಆಗಿದೆ. ಅರ್ಜಿ ಶುಲ್ಕ ಪಾವತಿಗೆ ಕಡೆಯ ದಿನಾಂಕ ಡಿಸೆಂಬರ್​ 29 ಆಗಿದೆ.

ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಕೆಗೆ ಅಭ್ಯರ್ಥಿಗಳು gadag.dcourts.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ: ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿದೆ ಉದ್ಯೋಗ: 10ನೇ ತರಗತಿ ಪಾಸ್‌ ಮಾಡಿದ್ದರೆ ಸಾಕು!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.