ETV Bharat / state

ಕೊತಬಾಳ ಗ್ರಾಪಂ ಮಾಸ್ಟರ್ ಪ್ಲ್ಯಾನ್, ವ್ಯಾಕ್ಸಿನ್​ಗಾಗಿ ಓಡೋಡಿ ಬಂದ ಗ್ರಾಮಸ್ಥರು.. - ಕೊರೊನಾ ವ್ಯಾಕ್ಸಿನ್ ಜಾಗೃತಿ

ಗ್ರಾಮದಲ್ಲಿ ವ್ಯಾಕ್ಸಿನೇಶನ್ ಹಾಕಿಸಿಕೊಂಡವರಿಗೆ ಆರೋಗ್ಯ ಇಲಾಖೆ ವತಿಯಿಂದ ಪತ್ರವೊಂದನ್ನು ನೀಡಲಾಗುತ್ತದೆ. ಪಡಿತರ ಚೀಟಿದಾರರು ತಮ್ಮ ಪಡಿತರ ಕಾರ್ಡ್​ನೊಂದಿಗೆ ಆರೋಗ್ಯ ಇಲಾಖೆ ಪತ್ರ ತರಬೇಕು. ವ್ಯಾಕ್ಸಿನ್ ಹಾಕಿಸಿಕೊಂಡ ಬಗ್ಗೆ ಪತ್ರ‌ ನೀಡಿದರೆ ಮಾತ್ರ ಅಂತವರಿಗೆ ಪಡಿತರ ಹಂಚಿಕೆ ಮಾಡಲಾಗುವುದು ಎಂದು ಸೂಚಿಸಲಾಗಿದೆ.

kotabala-village
ಕೊತಬಾಳ ಗ್ರಾಪಂ ಮಾಸ್ಟರ್ ಪ್ಲ್ಯಾನ್,
author img

By

Published : Jun 5, 2021, 4:40 PM IST

ಗದಗ: ಕೊರೊನಾ ವ್ಯಾಕ್ಸಿನ್ ಜಾಗೃತಿಗಾಗಿ ಸರ್ಕಾರ ಹಾಗೂ ಜಿಲ್ಲಾಡಳಿತ ಹಲವು ಕ್ರಮಗಳನ್ನು ಕೈಗೊಂಡರು ಜನ ಮಾತ್ರ ಲಸಿಕೆ ಪಡೆಯಲು ಮುಂದೆ ಬರುತ್ತಿಲ್ಲ. ಈ ಹಿನ್ನೆಲೆ ಕೊರೊ‌ನಾ ವ್ಯಾಕ್ಸಿನ್ ಹಾಕಿಸಿಕೊಳ್ಳದವರಿಗೆ ಜಿಲ್ಲೆಯ ರೋಣ ತಾಲೂಕಿನ ಕೊತಬಾಳ ಗ್ರಾಮದಲ್ಲಿ ಪಡಿತರ ನೀಡದಿರಲು ತೀರ್ಮಾನಿಸಲಾಗಿದೆ.

ಓದಿ: ಲಾಕ್​​​​ಡೌನ್ ಎಫೆಕ್ಟ್​​​​: ತರಕಾರಿ ಬೆಲೆಗಳ ಏರಿಳಿತ.. ಚಿಲ್ಲರೆ ವ್ಯಾಪಾರಿಗಳಿಗೆ ಸಂಕಷ್ಟ

ಗ್ರಾಪಂ ಸಾಮಾನ್ಯ ಸಭೆಯಲ್ಲಿ ಜನರ ಒಳಿತಿಗಾಗಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಯಾರು ವ್ಯಾಕ್ಸಿನ್ ಹಾಕಿಸಿಕೊಳ್ಳುವದಿಲ್ಲ, ಅಂತಹ ಕುಟುಂಬಗಳಿಗೆ ಪಡಿತರ ನೀಡದಿರುವಂತೆ ಪಡಿತರ ಅಂಗಡಿಗಳಿಗೆ ಎಚ್ಚರಿಕೆ ನೀಡಲಾಗಿದೆ.

ಗ್ರಾಮದಲ್ಲಿ ವ್ಯಾಕ್ಸಿನೇಶನ್ ಹಾಕಿಸಿಕೊಂಡವರಿಗೆ ಆರೋಗ್ಯ ಇಲಾಖೆ ವತಿಯಿಂದ ಪತ್ರವೊಂದನ್ನು ನೀಡಲಾಗುತ್ತದೆ. ಪಡಿತರ ಚೀಟಿದಾರರು ತಮ್ಮ ಪಡಿತರ ಕಾರ್ಡ್​ನೊಂದಿಗೆ ಆರೋಗ್ಯ ಇಲಾಖೆ ಪತ್ರ ತರಬೇಕು. ವ್ಯಾಕ್ಸಿನ್ ಹಾಕಿಸಿಕೊಂಡ ಬಗ್ಗೆ ಪತ್ರ‌ ನೀಡಿದರೆ ಮಾತ್ರ ಅಂತವರಿಗೆ ಪಡಿತರ ಹಂಚಿಕೆ ಮಾಡಲಾಗುವುದು ಎಂದು ಸೂಚಿಸಲಾಗಿದೆ.

ಗ್ರಾಮಸ್ಥರು ಹಾಗೂ ಗ್ರಾಪಂ ಸದಸ್ಯರು ಒಟ್ಟಾಗಿ ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ತಗೆದುಕೊಂಡ ಈ ನಿರ್ಧಾರಕ್ಕೆ ಗ್ರಾಮಸ್ಥರು ವ್ಯಾಕ್ಸಿನ್ ಹಾಕಿಸಿಕೊಳ್ಳಲು ಮುಂದೆ ಬರುತ್ತಿದ್ದು, ಸದ್ಯ ಸುಮಾರು ನೂರಕ್ಕೂ ಹೆಚ್ಚು ಜನರು ಲಸಿಕೆ ಹಾಕಿಸಿಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.