ETV Bharat / state

ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ ಸಕಲ ಸಿದ್ಧತೆ : ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು - Gadag news

ಮುಕ್ತ ಹಾಗೂ ಶಾಂತಿಯುತ ಮತದಾನ ನಡೆಯಲು ಮತ್ತು ಜಿಲ್ಲೆಯಾದ್ಯಂತ ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳುವ ಸಲುವಾಗಿ ಜಿಲ್ಲೆಯಾದ್ಯಂತ ಅಕ್ಟೋಬರ್ 28ರ ಮಧ್ಯರಾತ್ರಿವರೆಗೆ ಮದ್ಯ ಮಾರಾಟ ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

Preparing for Western Graduate Election
ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ ಸಕಲ ಸಿದ್ಧತೆ
author img

By

Published : Oct 27, 2020, 8:58 PM IST

ಗದಗ : ಕರ್ನಾಟಕ ಪಶ್ಚಿಮ ಪದವೀಧರರ ಮತ ಕ್ಷೇತ್ರ ಚುನಾವಣೆ ನಡೆಯಲಿದ್ದು, ಚುನಾವಣಾ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಿಸುವುದರ ಜೊತೆಗೆ ಮುಕ್ತ, ನಿಷ್ಪಕ್ಷಪಾತ, ನ್ಯಾಯ ಸಮ್ಮತ ಹಾಗೂ ಶಾಂತಿಯುತ ಮತದಾನಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಕೊರೊನಾ ಸೋಂಕು ನಿಯಂತ್ರಿಸಲು ಚುನಾವಣಾ ಆಯೋಗದ ನಿರ್ದೇಶನದಂತೆ ಎಲ್ಲ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮತಗಟ್ಟೆಗಳಲ್ಲಿ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಮೊದಲಾದ್ಯತೆ ನೀಡಲಾಗಿದೆ. ಮತಗಟ್ಟೆಗಳಲ್ಲಿ ಮತದಾರರ ಮಧ್ಯೆ ವ್ಯಕ್ತಿಗತ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಹಾಗೂ ಪ್ರತಿಯೊಬ್ಬರೂ ಮಾಸ್ಕ್ ಧರಿಸುವಂತೆ ಸೂಚಿಸಲಾಗಿದ್ದು, ಜನರಲ್ಲಿ ಜಾಗೃತಿ ಮೂಡಿಸಲಾಗಿದೆ.

ಅಲ್ಲದೇ, ಕೊರೊನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ. ಮತಗಟ್ಟೆಗಳಲ್ಲಿ ಜನಸಂದಣಿ ಆಗದಂತೆ ಕ್ರಮ ಕೈಗೊಳಲಾಗಿದೆ. ಇನ್ನು ಮುಕ್ತ ಹಾಗೂ ಶಾಂತಿಯುತ ಮತದಾನ ನಡೆಯಲು ಮತ್ತು ಜಿಲ್ಲೆಯಾದ್ಯಂತ ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳುವ ಸಲುವಾಗಿ ಜಿಲ್ಲೆಯಾದ್ಯಂತ ಅಕ್ಟೋಬರ್ 28ರ ಮಧ್ಯರಾತ್ರಿವರೆಗೆ ಮದ್ಯ ಮಾರಾಟ ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಗುಂಪುಗೂಡುವಿಕೆಯನ್ನು ತಡೆಗಟ್ಟಲು ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ. ಮತದಾರರಿಗೆ ಅಡಚಣೆ ಆಗಬಾರದೆಂಬ ಕಾರಣಕ್ಕೆ ಮತದಾನದಂದು ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಸಂತೆ, ಜಾತ್ರೆ ಅಥವಾ ಉತ್ಸವಗಳನ್ನು ರದ್ದುಪಡಿಸಲಾಗಿದೆ.

ತಾಲೂಕುವಾರು ಮತದಾರರ ವಿವರ : ಜಿಲ್ಲೆಯಾದ್ಯಂತ ಒಟ್ಟು 29 ಮತಗಟ್ಟೆಗಳಿದ್ದು, ಗದಗ 7711, ಮುಂಡರಗಿ 1318, ನರಗುಂದ 1176, ರೋಣ 1512, ಗಜೇಂದ್ರಗಡ 2122, ಶಿರಹಟ್ಟಿ 1063 ಹಾಗೂ ಲಕ್ಷ್ಮೇಶ್ವರ 1076 ಸೇರಿ ಪುರುಷರು 10,979, ಮಹಿಳೆಯರು 4,998 ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 15,978 ಮತದಾರರಿದ್ದಾರೆ.

ಜಿಲ್ಲೆಯಲ್ಲಿರುವ ಮತಗಟ್ಟೆಗಳು : ಗದಗ-ಬೆಟಗೇರಿ ನಗರದ ಮುನ್ಸಿಪಲ್ ಜ್ಯೂ.ಕಾಲೇಜ್, ಜೆ.ಸಿ.ಪ್ರೌಢಶಾಲೆ, ತಹಶೀಲ್ದಾರ್ ಕಚೇರಿ. ಗದಗ ತಾಲೂಕಿನ ಸರ್ಕಾರಿ ಕನ್ನಡ ಗಂಡು ಮಕ್ಕಳ ಮಾದರಿ ಶಾಲೆ ಕೋಟುಮಚಗಿ, ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಲೆ ಲಕ್ಕುಂಡಿ, ಸರ್ಕಾರಿ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ಹುಲಕೋಟಿ, ಪಟ್ಟಣ ಪಂಚಾಯತ ಮುಳಗುಂದ.

ಮುಂಡರಗಿ ನಗರದ ಮಿನಿ ವಿಧಾನಸೌಧದ ನೆಲ ಮಹಡಿಯ ತಹಶೀಲ್ದಾರ್ ಕಚೇರಿ ಮತ್ತು ಪಡಸಾಲೆ. ನರಗುಂದ ಪಟ್ಟಣದ ತಹಶೀಲ್ದಾರ್ ಕಚೇರಿ, ನರಗುಂದ ತಾಲೂಕಿನ ಗ್ರಾಮ ಪಂಚಾಯತ ಸಭಾಭವನ ಕೊಣ್ಣೂರು. ರೋಣ ಪಟ್ಟಣದ ಹಳೇ ತಾಲೂಕು ಕಚೇರಿ ಪುರಸಭೆ ಕಾರ್ಯಾಲಯ, ರೋಣ ತಾಲೂಕಿನ ಎಸ್.ವಿ.ಜ್ಯೂ.ಕಾಲೇಜ್ ಬೆಳವಣಿಕೆ, ಎಪಿಎಂಸಿ ಕಚೇರಿ ಹೊಳೆಆಲೂರ.

ಗಜೇಂದ್ರಗಡ ಪಟ್ಟಣದ ಎಪಿಎಂಸಿ ಮಾರುಕಟ್ಟೆ, ರೈತ ಭವನ, ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆ ನರೇಗಲ್. ಶಿರಹಟ್ಟಿ ಪಟ್ಟಣದ ತಹಶೀಲ್ದಾರ್ ಕಚೇರಿ, ಶಿರಹಟ್ಟಿ ತಾಲೂಕಿನ ಸರ್ಕಾರಿ ಕನ್ನಡ ಗಂಡು ಮಕ್ಕಳ ಮಾದರಿ ಶಾಲೆ ಬೆಳ್ಳಟ್ಟಿ. ಲಕ್ಷ್ಮೇಶ್ವರ ಪಟ್ಟಣದ ಮುನ್ಸಿಪಲ್ ಕಾರ್ಪೋರೇಶನ್.

ವಿಧಾನ ಪರಿಷತ್ ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ ಯಶಸ್ವಿಗಾಗಿ ಪಿಆರ್‍ಒ ಎಪಿಆಆರ್‍ಒ ಮತ್ತು ಎಂಒ ಸೇರಿ ಜಿಲ್ಲೆಯಲ್ಲಿ ಒಟ್ಟು 185 ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅದರಂತೆ 9 ಜನ ಸೆಕ್ಟರ್ ಅಧಿಕಾರಿಗಳು, ತಾಲೂಕಿಗೊಂದರಂತೆ 7 ಪ್ಲೈಯಿಂಗ್ ಸ್ಕ್ವಾಡ್ ತಂಡ ರಚಿಸಲಾಗಿದ್ದು, 21 ಅಧಿಕಾರಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಎಸ್‍ಟಿಯಲ್ಲಿ 7 ಹಾಗೂ ವಿವಿಟಿಯಲ್ಲಿ 14 ಜನರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ಶಾಂತಿಯುತ ಮತದಾನ ಜರುಗಿಸಲು ಸೂಕ್ತ ಪೊಲೀಸ್ ಬಿಗಿ ಭದ್ರತೆ ನಿಯೋಜಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.