ETV Bharat / state

ಕಾರಾಗೃಹದ ಕಿಟಕಿಗೆ ನೇಣು ಬಿಗಿದುಕೊಂಡು ವಿಚಾರಣಾಧೀನ ಕೈದಿ ಆತ್ಮಹತ್ಯೆ - ವಿಚಾರಣಾಧೀನ ಖೈದಿ ಆತ್ಮಹತ್ಯೆ

ಆರೋಪಿಯ ವಿರುದ್ಧ ಅಂತಹ ಯಾವುದೇ ಗಂಭೀರ ಆರೋಪವಿಲ್ಲ. ಇದೊಂದು ಸುಳ್ಳು ಪ್ರಕರಣವಾಗಿದೆ ಎಂಬ ವಾದ ಮಂಡನೆಯ ಬಳಿಕ ಎರಡು ದಿನಕ್ಕೊಮ್ಮೆ ಪೊಲೀಸ್ ಠಾಣೆಗೆ ಭೇಟಿ ನೀಡಿ ಸಹಿ‌ ಹಾಕಿ ಬರಬೇಕೆಂದು ಷರತ್ತು ವಿಧಿಸಿ ಗುರುವಾರ (ಏ.7)ದಂದು 5.25ಕ್ಕೆ ಜಾಮೀನು ಆದೇಶವಾಗಿತ್ತು. ಆದರೆ, ನಿನ್ನೆ ನ್ಯಾಯಾಲಯದ ಸಮಯ ಮುಗಿದಿದ್ದರಿಂದ ಕಾರಾಗೃಹಕ್ಕೆ ಮಾಹಿತಿ ಬಂದಿರಲಿಲ್ಲ..

Prisoner commits suicide in suicide in gadag Jail
ಕಾರಾಗೃಹದ ಕಿಟಕಿಗೆ ನೇಣು ಬಿಗಿದುಕೊಂಡು ವಿಚಾರಣಾಧೀನ ಖೈದಿ ಆತ್ಮಹತ್ಯೆ
author img

By

Published : Apr 8, 2022, 11:09 AM IST

ಗದಗ : ಪೋಕ್ಸೋ ಕಾಯ್ದೆಯಡಿ ಗದಗ ಜಿಲ್ಲಾ ಕಾರಾಗೃಹದ ಪಾಲಾಗಿದ್ದ ವಿಚಾರಣಾಧೀನ ಕೈದಿಯೊಬ್ಬ ಕಟ್ಟಡದ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಗದಗ ತಾಲೂಕಿನ ಅಡವಿ ಸೋಮಾಪುರ ತಾಂಡಾದ ನಿವಾಸಿ ರಾಜು ಪಾಂಡಪ್ಪ ಲಮಾಣಿ (19) ಆತ್ಮಹತ್ಯೆಗೆ ಶರಣಾದ ಯುವಕ.

ಶುಕ್ರವಾರ ಮಧ್ಯರಾತ್ರಿ 1.30ರ ಸುಮಾರಿಗೆ ಕಾರಾಗೃಹದಲ್ಲಿರುವ ಇನ್ನಿತರ ಕೈದಿಗಳ ಟವೆಲ್ ತೆಗೆದುಕೊಂಡು ಮೊದಲ ಬಾರಿಗೆ ಪ್ರಯತ್ನಿಸುತ್ತಾನೆ. ಸಾಧ್ಯವಾಗದಿದ್ದಾಗ ಪುನಃ ಎರಡನೇ ಬಾರಿಗೆ ಪ್ರಯತ್ನಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಯ ದೃಶ್ಯ ಕಾರಾಗೃಹದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕಾರಾಗೃಹದ ಕಿಟಕಿಗೆ ನೇಣು ಬಿಗಿದುಕೊಂಡು ವಿಚಾರಣಾಧೀನ ಕೈದಿ ಆತ್ಮಹತ್ಯೆ..

ಹುಡುಗಿಯ ಮನೆಯವರು ಗುರುವಾರ ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿ, ಜಾಮೀನು ಮೇಲೆ ಬಿಡುಗಡೆಯಾದರೂ ನಿನ್ನನ್ನು ಬಿಡುವುದಿಲ್ಲ ಎಂದು ಧಮ್ಕಿ ಹಾಕಿದ್ದಾರೆ. ಇದರಿಂದ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತ ಯುವಕನ ಕುಟುಂಬಸ್ಥರು ಆರೋಪಿಸಿದ್ದಾರೆ. ಅಲ್ಲದೇ ಆತ್ಮಹತ್ಯೆಗೆ ಜೈಲು ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣವೆಂದು ದೂರಿದ್ದಾರೆ.

ಅಡವಿ ಸೋಮಾಪುರ ಗ್ರಾಮದ ರಾಜು ಪಾಂಡಪ್ಪ ಲಮಾಣಿ ಅದೇ ಊರಿನ‌ ಹುಡುಗಿಯನ್ನು ಪ್ರೀತಿಸಿದ್ದ. ಹುಡುಗಿ‌ ಕಾಣೆಯಾಗಿದ್ದಾಳೆಂದು ಗ್ರಾಮೀಣ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣ ದಾಖಲಾದ 8 ದಿನಗಳ ಬಳಿಕ ಸಿಕ್ಕ ಹುಡುಗಿಯನ್ನು ಗ್ರಾಮೀಣ ಪೊಲೀಸ್ ಠಾಣೆಗೆ ಕರೆದುಕೊಂಡು 161 ಹೇಳಿಕೆಯನ್ನು ದಾಖಲಿಸಿದ್ದಾರೆ. ಈ ಹೇಳಿಕೆಯಲ್ಲಿ 'ರಾಜು ನಾನು ಬೆಂಗಳೂರು, ಗೋವಾಕ್ಕೆ ಹೋಗಿದ್ದೆವು. ಹೋದಲ್ಲೆಲ್ಲ ಜೊತೆಗಿದ್ದೇವೆ ಎಂದು ಹೇಳಿದ್ದಾಳೆ.

ಆದರೆ, ನ್ಯಾಯಾಧೀಶರ ಮುಂದೆ 164ರಡಿ ಹೇಳಿಕೆ ದಾಖಲಿಸಿದ್ದು, 'ನಾನು ಗೆಳತಿಯರೊಂದಿಗೆ ಹೋಗಿದ್ದೆ. ರಾಜು ಮೇಲೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸುಳ್ಳು ಪ್ರಕರಣ ದಾಖಲಿಸಿದ್ದಾರೆ ಎಂದು ಹೇಳಿದ್ದಳು'. ಇದಾದ ಬಳಿಕ ಯುವಕನ ಪೋಷಕರು ಜಾಮೀನು ಅರ್ಜಿ ಸಲ್ಲಿಸಿ, ಬಳಿಕ ಸಾಕ್ಷಿದಾರರಿಗೆ ನೋಟಿಸ್ ನೀಡಲಾಗಿದೆ.

Prisoner commits suicide in suicide in gadag Jail
ರಾಜು ಪಾಂಡಪ್ಪ ಲಮಾಣಿ : ಆತ್ಮಹತ್ಯೆ ಮಾಡಿಕೊಂಡ ವಿಚಾರಣಾಧೀನ ಕೈದಿ

ಆರೋಪಿಯ ವಿರುದ್ಧ ಅಂತಹ ಯಾವುದೇ ಗಂಭೀರ ಆರೋಪವಿಲ್ಲ. ಇದೊಂದು ಸುಳ್ಳು ಪ್ರಕರಣವಾಗಿದೆ ಎಂಬ ವಾದ ಮಂಡನೆಯ ಬಳಿಕ ಎರಡು ದಿನಕ್ಕೊಮ್ಮೆ ಪೊಲೀಸ್ ಠಾಣೆಗೆ ಭೇಟಿ ನೀಡಿ ಸಹಿ‌ ಹಾಕಿ ಬರಬೇಕೆಂದು ಷರತ್ತು ವಿಧಿಸಿ ಗುರುವಾರ (ಏ.7)ದಂದು 5.25ಕ್ಕೆ ಜಾಮೀನು ಆದೇಶವಾಗಿತ್ತು. ಆದರೆ, ನಿನ್ನೆ ನ್ಯಾಯಾಲಯದ ಸಮಯ ಮುಗಿದಿದ್ದರಿಂದ ಕಾರಾಗೃಹಕ್ಕೆ ಮಾಹಿತಿ ಬಂದಿರಲಿಲ್ಲ.

ನಾನು ಕರೆ ಮಾಡಿ ಜಾಮೀನು ಸಿಕ್ಕಿರುವ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೆ. ಜಾಮೀನು ಸಿಕ್ಕಿರುವ ಮಾಹಿತಿ ಮೃತ ಯುವಕನಿಗೆ ಸಿಕ್ಕಿದ್ದರೆ ಹೀಗಾಗುತ್ತಿರಲಿಲ್ಲವೇನೋ ಎಂದು ಗದಗ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರು ಹಾಗೂ ಯುವಕನ ಪರ ವಕೀಲ ಎಂ.ಎ ಮೌಲ್ವಿ ಮಾಹಿತಿ ನೀಡಿದ್ದಾರೆ.

ಏನಿದು ಪ್ರಕರಣ?: ರಾಜು ಪಾಂಡಪ್ಪ ಲಮಾಣಿ‌ ಗದಗನ ಜೆಟಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ. ಅದೇ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಅಡವಿ ಸೋಮಾಪುರ ಗ್ರಾಮದ ಅಪ್ರಾಪ್ತ ವಯಸ್ಸಿನ ಯುವತಿಯನ್ನು ಪ್ರೀತಿಸುತ್ತಿದ್ದ. ತಾನು ಪ್ರೀತಿಸುತ್ತಿದ್ದ ಹುಡುಗಿಯನ್ನು ಗೋವಾಗೆ ಕರೆದುಕೊಂಡು ಹೋಗಿದ್ದನಂತೆ.

ಈ ಬಗ್ಗೆ ಹುಡುಗಿಯ ಮನೆಯವರು ಗದಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಕಾಣೆ ಪ್ರಕರಣ ದಾಖಲಿಸಿದ್ದರಂತೆ. ನಂತರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಹೀಗಾಗಿ, ಕಳೆದ 20-25 ದಿನಗಳ ಹಿಂದೆಯಷ್ಟೇ ರಾಜು ಲಮಾಣಿ ಜೈಲು ಪಾಲಾಗಿದ್ದ.

ಇದನ್ನೂ ಓದಿ: ವಿದ್ಯುತ್​ ಶಾರ್ಟ್ ಸರ್ಕ್ಯೂಟ್​ ಆಗಿ ನಾಲ್ವರು ಸಾವು.. ಇಳಿಯ ವಯಸ್ಸಿನಲ್ಲಿ ಮಗ-ಸೊಸೆ, ಮೊಮ್ಮಕ್ಕಳನ್ನು ಕಳೆದುಕೊಂಡ ಅಜ್ಜ-ಅಜ್ಜಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.