ಗದಗ: ತಾವು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಕೊರೆಯುವ ಚಳಿಯಲ್ಲಿಯೂ ಸಹ ರೈತರು ಪ್ರತಿಭಟನೆ ನಡೆಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಆಡಳಿತ ಭವನದ ಮುಂದೆ ' ರೈತ ಸೇನಾ ಕರ್ನಾಟಕ ' ನರೇಗಲ್ ಘಟಕದಿಂದ ಈ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು ರೈತರು ಸಹ ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಕೂಡಲೇ ಕಡಲೆ, ಕುಸುಬಿ, ಬೆಳೆಗಳಿಗೆ ಬೆಂಬಲ ಬೆಲೆ ನೀಡಿ ಶೀಘ್ರವೇ ಕಡಲೇ ಕೇಂದ್ರವನ್ನು ತೆರಯಬೇಕು, ಇಲ್ಲದೆ ಹೋದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ಮಾಡೋದಾಗಿ ಪ್ರತಿಭಟನಾ ನಿರತ ರೈತರು ಎಚ್ಚರಿಕೆ ನೀಡಿದ್ದಾರೆ.