ಗದಗ: ಸ್ಮಶಾನಕ್ಕೆ ಹೋಗಲು ರಸ್ತೆ ಇಲ್ಲದ್ದಕ್ಕೆ ಆಕ್ರೋಶಗೊಂಡ ರೊಳ್ಳಿ ಗ್ರಾಮಸ್ಥರು ಪಟ್ಟಣ ಪಂಚಾಯತ್ ಎದುರು ಶವದ ಸಮೇತ ಪ್ರತಿಭಟನೆ ನಡೆಸಿದ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ನಡೆದಿದೆ.
ನರೇಗಲ್ ಪಟ್ಟಣದ ಮಲ್ಲವ್ವ ಧರ್ಮಾಯತ(40) ಅನಾರೋಗ್ಯದ ಹಿನ್ನೆಲೆ ಸಾವನ್ನಪ್ಪಿದ್ದಳು. ಆದರೆ, ಸ್ಮಶಾನಕ್ಕೆ ಹೋಗಲು ರಸ್ತೆ ಇಲ್ಲದ್ದಕ್ಕೆ ಗ್ರಾಮಸ್ಥರು ಶವದ ಸಮೇತ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಈ ವೇಳೆ ಪಟ್ಟಣ ಪಂಚಾಯತ್ ಅಧಿಕಾರಿಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಅವರು, ಕೂಡಲೇ ರಸ್ತೆ ನಿರ್ಮಾಣ ಮಾಡುವಂತೆ ಒತ್ತಾಯಿಸಿದರು. ಘಟನಾ ಸ್ಥಳಕ್ಕಾಗಮಿಸಿದ ಪಿಎಸ್ಐ ರೊಳ್ಳಿ ಗ್ರಾಮಸ್ಥರ ಮನವೊಲಿಸಿದರು.