ಗದಗ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ನಗರದಲ್ಲಿ ಸಿಎಂ ಎಸ್ವೈ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಸರ್ಕಾರದ ನಿಲುವಿನ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ಮಾಡಲಾಯಿತು.
ಸಿಎಂ ಬಿಎಸ್ ಯಡಿಯೂರಪ್ಪ ಅವರು ಅಧಿವೇಶನದ ಸಂದರ್ಭದಲ್ಲಿ ಒಳಗೊಂದು ಹೊರಗೊಂದು ಹೇಳಿಕೆ ನೀಡುವ ಮೂಲಕ ಸಮಾಜದ ಹೋರಾಟದ ದಿಕ್ಕು ತಪ್ಪಿಸುತ್ತಿದ್ದಾರೆ. ಕುಲ ಅಧ್ಯಯನ ಹಾಗೂ ಹಿಂದುಳಿದ ಆಯೋಗಕ್ಕೆ ಪತ್ರ ಬರೆಯುವ ದ್ವಂದ್ವ ನಿಲುವು ಕೈಬಿಟ್ಟು 2ಎಗೆ ಸೇರಿಸಬೇಕು ಎಂದು ಆಗ್ರಹಿಸಿದರು.
ಪಂಚಮಸಾಲಿ ಸಮಾಜದ ಅನೇಕ ಜನರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಮೀಸಲಾತಿ ನೀಡದೇ ಹೋದರೆ ಮುಂದಿನ ದಿನಮಾನಗಳಲ್ಲಿ ರಾಜ್ಯದಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಸಮಾಜದವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಇದನ್ನೂ ಓದಿ: ಪಂಚಮಸಾಲಿ ಮೀಸಲಾತಿ: ಯತ್ನಾಳ್ ಬೇಡಿಕೆಗೆ ಸಿಎಂ 'ಡೋಂಟ್ ಕೇರ್'