ETV Bharat / state

ಲಕ್ಷ್ಮೇಶ್ವರದ ಶಿಗ್ಲಿ ಪಶು ಆಸ್ಪತ್ರೆಗೆ ವೈದ್ಯರ ನೇಮಕ ಮಾಡುವಂತೆ ಪ್ರತಿಭಟನೆ - ಲಕ್ಷ್ಮೇಶ್ವರದ ಶಿಗ್ಲಿ ಗ್ರಾಮಸ್ಥರಿಂದ ಪ್ರತಿಭಟನೆ

ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದ ಪಶು ಆಸ್ಪತ್ರೆಗೆ ವೈದ್ಯರನ್ನು ನೇಮಿಸುವಂತೆ ಗ್ರಾಮದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.

protest in Shigli villagers deman for veterinarian
ಪಶು ವೈದ್ಯರನ್ನು ನೇಮಿಸುವಂತೆ ಶಿಗ್ಲಿ ಗ್ರಾಮದಲ್ಲಿ ಪ್ರತಿಭಟನೆ
author img

By

Published : Nov 13, 2020, 7:51 PM IST

ಗದಗ : ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದ ಪಶು ಆಸ್ಪತ್ರೆಗೆ ವೈದ್ಯರನ್ನು ನೇಮಕ ಮಾಡುವಂತೆ ಆಗ್ರಹಿಸಿ, ಕರವೇ ಮತ್ತು ಶ್ರೀರಾಮ ಸೇನೆ ಕಾರ್ಯಕರ್ತರು ಹಾಗೂ ರೈತರು ಶಿಗ್ಲಿ ಗ್ರಾಮದ ಬಜಾರ್ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಶಿಗ್ಲಿ ಗ್ರಾಮದ ಪಶು ಆಸ್ಪತ್ರೆಯಲ್ಲಿ ವೈದ್ಯರ ನೇಮಕವಾಗದೆ ಸುಮಾರು ಮೂರ್ನಾಲ್ಕು ವರ್ಷಗಳೇ ಕಳೆದಿವೆ. ಇದರಿಂದ ದನಕರುಗಳಿಗೆ ಚಿಕಿತ್ಸೆ ನೀಡಲು ವೈದ್ಯರಿಲ್ಲದೆ ಈ ಭಾಗದ ರೈತರು ತೊಂದರೆಗೀಡಾಗಿದ್ದಾರೆ‌.

ಶಿಗ್ಲಿ ಗ್ರಾಮದಲ್ಲಿ ಪ್ರತಿಭಟನೆ ನಡೆಸಲಾಯಿತು

ಪಶು ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಸೂಕ್ತ ಚಿಕಿತ್ಸೆ ಸಿಗದೆ ಜಾನುವಾರುಗಳು ಅಸುನೀಗುತ್ತಿವೆ. ಇದರಿಂದ ರೈತರಿಗೆ ಭಾರೀ ನಷ್ಟವಾಗುತ್ತಿದೆ. ವೈದ್ಯರಿಲ್ಲದ ಕಾರಣ ಲಕ್ಷಾಂತರ ರೂ. ಖರ್ಚು ಮಾಡಿ ಕಟ್ಟಿರುವ ಆಸ್ಪತ್ರೆ ಪ್ರಯೋಜನಕ್ಕೆ ಬಾರದಂತಾಗಿದೆ. ಮುಂದಿನ 15 ದಿನಗಳ ಒಳಗಾಗಿ ಪಶು ವೈದ್ಯರನ್ನು ನೇಮಕ ಮಾಡಬೇಕು. ಇಲ್ಲದಿದ್ದರೆ ಉಪವಾಸ ಸತ್ಯಾಗ್ರಹ ಮಾಡಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.