ETV Bharat / state

ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ಮಧ್ಯೆ ಗಲಾಟೆ : ಗದಗನ ಈ ಗ್ರಾಮದಲ್ಲಿ ಮತದಾನ ಸ್ಥಗಿತ - ಗದಗದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ಮಧ್ಯೆ ಗಲಾಟೆ

ಇದರಿಂದ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಹೆಚ್ಚಿನ ಸಂಖ್ಯೆಯ ಪೊಲೀಸರು ಗ್ರಾಮಕ್ಕೆ ದೌಡಾಯಿಸಿದ್ದಾರೆ. ಗ್ರಾಮದಲ್ಲಿ ಸೂಕ್ತ ಬಂದೋಬಸ್ತ್ ಮಾಡಿದ್ದು ಶಾಂತಿ ಕಾಪಾಡುವ ಕೆಲಸವನ್ನು ಪೊಲೀಸರು ಮಾಡುತ್ತಿದ್ದಾರೆ..

ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ಮಧ್ಯೆ ಗಲಾಟೆ
Quarrel between Congress and BJP activists in Gadag
author img

By

Published : Dec 27, 2020, 11:08 AM IST

Updated : Dec 27, 2020, 12:40 PM IST

ಗದಗ : ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವಿನ ಗಲಾಟೆಯಿಂದಾಗಿ ಜಿಲ್ಲೆಯ ಮತಗಟ್ಟೆವೊಂದರಲ್ಲಿ 2ನೇ ಹಂತದ ಗ್ರಾಪಂ ಚುನಾವಣಾ ಮತದಾನ ಸ್ಥಗಿತಗೊಂಡಿದೆ.

ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ಮಧ್ಯೆ ಗಲಾಟೆ

ರೋಣ ತಾಲೂಕಿನ ಮೆಣಸಗಿ ಗ್ರಾಮದ ಮತಗಟ್ಟೆವೊಂದರಲ್ಲಿ ಈ ಘಟನೆ ನಡೆದಿದ್ದು, ಮೆಣಸಗಿ ಗ್ರಾಮ ಪಂಚಾಯತ್‌ಗೆ ನಡೆಯುತ್ತಿರುವ ಚುನಾವಣೆಯಲ್ಲಿ ಬಿಜೆಪಿ ಜಿಪಂ ಸದಸ್ಯ ಶಿವಕುಮಾರ್ ನೀಲಗುಂದ ಅವರು ಮತದಾನ ಮಾಡಲು ಹೋಗಿದ್ದ ವೇಳೆ ಮತಗಟ್ಟೆಯ ಏಜೆಂಟ್‌ ಅಲ್ಲದ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ.

ಓದಿ: ಗ್ರಾಪಂ ಚುನಾವಣೆಗೆ 2ನೇ ಹಂತದ ಮತದಾನ : ಡಿಸಿಎಂ ಲಕ್ಷ್ಮಣ್​ ಸವದಿ ಹಕ್ಕು ಚಲಾವಣೆ

ಜಿಪಂ ಸದಸ್ಯರ ಮೇಲೆ ಕಾಂಗ್ರೆಸ್ ಮುಖಂಡ ಹಿರೇಗೌಡರ ಸಹೋದರರು ಹಲ್ಲೆ ನಡೆಸಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದು, ಅಧಿಕಾರಿಗಳ ನಿರ್ಲಕ್ಷ್ಯವೇ ಈ ಗಲಾಟೆಗೆ ಕಾರಣ ಎನ್ನಲಾಗುತ್ತಿದೆ. ನಮ್ಮ ಬೆಂಬಲಿತ ಅಭ್ಯರ್ಥಿಗೆ ಮತ ಹಾಕುವಂತೆ ಎರಡು ಗುಂಪುಗಳ‌ ನಡುವೆ ವಾಗ್ವಾದ ನಡೆದಿದ್ದು, ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ನೂಕಾಟ-ತಳ್ಳಾಟ ನಡೆದಿದೆ.

ಇದರಿಂದ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಹೆಚ್ಚಿನ ಸಂಖ್ಯೆಯ ಪೊಲೀಸರು ಗ್ರಾಮಕ್ಕೆ ದೌಡಾಯಿಸಿದ್ದಾರೆ. ಗ್ರಾಮದಲ್ಲಿ ಸೂಕ್ತ ಬಂದೋಬಸ್ತ್ ಮಾಡಿದ್ದು ಶಾಂತಿ ಕಾಪಾಡುವ ಕೆಲಸವನ್ನು ಪೊಲೀಸರು ಮಾಡುತ್ತಿದ್ದಾರೆ.

Last Updated : Dec 27, 2020, 12:40 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.