ಗದಗ: ಶೀಘ್ರದಲ್ಲೇ ಮತ್ತೆ ವಿಧಾನಸಭೆ ಚುನಾವಣೆ ಬಂದ್ರೂ ಅಚ್ಚರಿಯಿಲ್ಲ ಎಂದು ಹೇಳಿಕೆ ನೀಡಿದ ಡಾ. ಜಿ ಪರಮೇಶ್ವರ್ಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ. ಸಿ. ಪಾಟೀಲ್ ಕಿಡಿ ಕಾರಿದ್ದಾರೆ.
ಗದಗ ನಗರದ ಗ್ರೇನ್ ಮಾರುಕಟ್ಟೆಯಲ್ಲಿ ಇದೆ ತಿಂಗಳು 4 ರಂದು ಸಂಭವಿಸಿದ ಅಗ್ನಿ ಅವಘಡ ನಡೆದ ಸ್ಥಳಕ್ಕೆ ಗದಗ ಜಿಲ್ಲಾ ಉಸ್ತುವಾರಿ ಹಾಗೂ ಸಚಿವ ಸಿ.ಸಿ. ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸ್ ಇಲಾಖೆಯ ಮಾಹಿತಿಯಂತೆ 1 ಕೋಟಿ 20 ಲಕ್ಷ ರೂಪಾಯಿಗಳಷ್ಟು ಹಾನಿ ಸಂಭವಿಸಿದೆ. ಆದ್ರೆ ವ್ಯಾಪಾರಿಗಳು ಜಾಸ್ತಿ ಹೇಳುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಧಾನ್ಯಗಳು, ತರಕಾರಿ, ಹಣ್ಣುಗಳು, ಕಿರಾಣಿ ಅಂಗಡಿಗಳು ಸೇರಿದಂತೆ 50 ಕ್ಕೂ ಅಧಿಕ ಅಂಗಡಿಗಳು ಸಂಪೂರ್ಣ ಭಸ್ಮವಾಗಿವೆ. ಹೀಗಾಗಿ ಅವರಿಗೆ ಸೂಕ್ತ ಪರಿಹಾರ ನೀಡುತ್ತೇವೆ, ಜಿಲ್ಲಾಡಳಿತ ಮತ್ತು ನಗರಸಭೆಯಿಂದ ಹಾನಿ ಕುರಿತು ವರದಿ ಸಹ ಕಳಿಸಿದ್ದೇನೆ. ಮಾರುಕಟ್ಟೆಯಲ್ಲಿ ಹಾನಿಯಾದ ಕುರಿತು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಗಮನಕ್ಕೆ ತಂದು ಆದಷ್ಟು ಬೇಗ ಪರಿಹಾರ ಒದಗಿಸಲಾಗುತ್ತದೆ ಎಂದು ಹೇಳಿದರು.
ಶೀಘ್ರದಲ್ಲೇ ಮತ್ತೆ ವಿಧಾನಸಭೆಗೆ ಚುನಾವಣೆ ಬಂದ್ರೂ ಅಚ್ಚರಿಯಿಲ್ಲ ಅಂತ ಹುಬ್ಬಳ್ಳಿಯಲ್ಲಿ ಹೇಳಿಕೆಗೆ ಕಿಡಿಕಾರಿದ ಪಾಟೀಲ್, ಡಾ. ಜಿ ಪರಮೇಶ್ವರ ಅವರ ಬಗ್ಗೆ ನನಗೆ ಅಪಾರವಾದ ಗೌರವ ಇದೆ. ಮೊದಲು ಅವರು ತಮ್ಮ ಪಕ್ಷದ ಅಧ್ಯಕ್ಷರ ಆಯ್ಕೆ ಕಡೆ ಗಮನ ಕೊಡಲಿ, ಆಮೇಲೆ ನಮ್ಮ ಪಕ್ಷದ ಬಗ್ಗೆ ವಿಚಾರ ಮಾಡಲಿ ಎಂದರು.