ಗದಗ: ದೆಹಲಿಯ ನಿಜಾಮುದ್ದೀನ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಗದಗಿನ 13 ಜನರ ರಕ್ತ ಮಾದರಿ ತಪಾಸಣೆ ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.
ಗದಗದ 10, ನರಗುಂದದ 3 ಜನರ ರಕ್ತ ಮಾದರಿಯನ್ನ ಪರೀಕ್ಷೆಗೆ ಕಳುಹಿಸಲಾಗಿತ್ತು. ಎಲ್ಲ 13 ಮಾದರಿಗಳು ನಕಾರಾತ್ಮಕವಾಗಿವೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಇದರಿಂದ ಗದಗ ಜನರು ನಿಟ್ಟುಸಿರು ಬಿಡುವಂತಾಗಿದೆ. ಇನ್ನು ಇದುವರೆಗೆ ಗದಗ ಜಿಲ್ಲೆಯಲ್ಲಿ 219 ಜನರ ಮೇಲೆ ನಿಗಾವಹಿಸಲಾಗಿದೆ. ಇದರಲ್ಲಿ 30 ಜನರು 28 ದಿನಗಳ ನಿಗಾ ಅವಧಿ ಪೂರೈಸಿದ್ದಾರೆ. 183 ಜನರು ಮನೆಯಲ್ಲಿಯೇ ಪ್ರತ್ಯೇಕ ನಿಗಾದಲ್ಲಿದ್ದಾರೆ.
ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ 6 ಜನರನ್ನ ನಿಗಾದಲ್ಲಿದ್ದಾರೆ. ಇನ್ನು ಇದೂವರೆಗೂ 76 ಜನರ ರಕ್ತ ಮತ್ತು ಗಂಟಲು ದ್ರವದ ಮಾದರಿಗಳುನ್ನ ಕಳುಹಿಸಲಾಗಿತ್ತು. ಇದರಲ್ಲಿ 62 ಜನರ ವರದಿ ನೆಗೆಟಿವ್ ಆಗಿವೆ. ಉಳಿದ 14 ಜನರ ವರದಿಗಳು ಬಾಕಿ ಇವೆ ಎಂದು ಮಾಹಿತಿ ನೀಡಿದ್ದಾರೆ.