ಗದಗ: ಜಾತ್ರೆ ಮುಗಿಸಿ ಹಿಂದಿರುಗುವ ವೇಳೆ ಬೊಲೆರೋ ಹಾಗೂ ಟ್ರ್ಯಾಕ್ಟರ್ ನಡುವೆ ಡಿಕ್ಕಿಯಾದ ಪರಿಣಾಮ 10 ವರ್ಷದ ಬಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಶ್ರೀಮಂತಗಡದಲ್ಲಿನ ಗ್ರಾಮದೇವತೆ ಹೊಳಲಮ್ಮ ದೇವಿಯ ಜಾತ್ರೆ ಮುಗಿಸಿಕೊಂಡು ಮರಳಿ ಬರುವಾಗ ಈ ಘಟನೆ ನಡೆದಿದೆ. ಇಳಿಜಾರು ಪ್ರದೇಶ ಇರುವುದರಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಮತ್ತಿಬ್ಬರನ್ನು ಪೊಲೀಸ್ ವಾಹನದಲ್ಲಿ ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.