ಗದಗ : ಬೈಕ್ಗೆ ಲಾರಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದ ಬಳಿ ನಡೆದಿದೆ.
ಆಸೀಫ್ ಮುಲ್ಲಾ (30) ಮೃತ ದುರ್ದೈವಿಯಾಗಿದ್ದು, ಹುಬ್ಬಳ್ಳಿಯ ಆನಂದ ನಗರದ ನಿವಾಸಿ ಎಂದು ತಿಳಿದು ಬಂದಿದೆ. ಆಸೀಫ್ ಪತ್ನಿಯ ಊರು ಗದಗ ಆಗಿರೋದ್ರಿಂದ ಹುಬ್ಬಳ್ಳಿಯಿಂದ ಗದಗಕ್ಕೆ ಬರುವಾಗ ಈ ದುರ್ಘಟನೆ ಸಂಭವಿಸಿದೆ. ಘಟನೆ ಬಳಿಕ ಲಾರಿ ಚಾಲಕ ಸ್ಥಳದಲ್ಲೇ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಆಸೀಫ್ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.