ETV Bharat / state

ಬಾಲಕಿಗೆ ಲೈಂಗಿಕ‌ ಕಿರುಕುಳ ಪ್ರಕರಣ: ಬಿಇಒಗೆ ದಂಡಸಮೇತ 5 ವರ್ಷ ಜೈಲು ಶಿಕ್ಷೆ

author img

By

Published : Jun 21, 2023, 8:43 PM IST

Updated : Jun 21, 2023, 9:57 PM IST

ಗದಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಬಿಇಒಗೆ ಶಿಕ್ಷೆ ವಿಧಿಸಿ ಆದೇಶ ನೀಡಿದೆ.

sexual-harassment-5-years-imprisonment-for-beo-who-sexually-harassed-a-minor
ಅಪ್ರಾಪ್ತೆಗೆ ಲೈಂಗಿಕ‌ ಕಿರುಕುಳ

ಗದಗ : ಅಪ್ರಾಪ್ತೆಗೆ ಲೈಂಗಿಕ‌ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಡರಗಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ (ಬಿಇಒ) ಶಂಕ್ರಪ್ಪ ಹಳ್ಳಿಗುಡಿ ಎಂಬವರಿಗೆ ಗದಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ ಹಾಗೂ 25 ಸಾವಿರ ರೂ.‌ ದಂಡ ವಿಧಿಸಿ ಇಂದು ಆದೇಶ ನೀಡಿತು. ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ರಾಜೇಶ್ವರ ಶೆಟ್ಟಿ ಅವರು ಆದೇಶ ಹೊರಡಿಸಿದರು. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿ 6 ತಿಂಗಳು ಜೈಲುವಾಸ ಶಿಕ್ಷೆ ನೀಡುವ ಕುರಿತು ಕೋರ್ಟ್‌ ಆದೇಶದಲ್ಲಿ ಎಚ್ಚರಿಕೆ ನೀಡಿದೆ.

ಶಂಕ್ರಪ್ಪ ಹಳ್ಳಿಗುಡಿ ವಿಜಯನಗರ ಜಿಲ್ಲೆ ಹೂವಿನಹಡಗಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಬಿಇಒ ಆಗಿದ್ದ ವೇಳೆ ಕಾರ್ಯಕ್ರಮದ ನೆಪವೊಡ್ಡಿ ವಿದ್ಯಾರ್ಥಿನಿಯ ಮನೆಗೆ ತೆರಳಿ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಕೇಳಿ ಬಂದಿತ್ತು. ಪ್ರಕರಣ ಕುರಿತಂತೆ ಸಂತ್ರಸ್ತೆಯ ಪೋಷಕರು ಘಟನೆ ಬಗ್ಗೆ ಮುಂಡರಗಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಬಳಿಕ 2020ರ ಮಾ.27ರಂದು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಜಿಲ್ಲಾ ನ್ಯಾಯಾಲಯ ಅಪರಾಧಿ ಶಂಕ್ರಪ್ಪಗೆ ಶಿಕ್ಷೆ ವಿಧಿಸಿದೆ.

ಪ್ರಕರಣದ ಹಿನ್ನೆಲೆ : ಶಂಕ್ರಪ್ಪ ಬಾಲಕಿಯ ಮನೆಗೆ ಹೋಗಿದ್ದ ಸಂದರ್ಭದಲ್ಲಿ ಮೂತ್ರ ವಿಸರ್ಜನೆ ಮಾಡಬೇಕಾಗಿದೆ, ಎಲ್ಲಿ ಮಾಡುವುದು? ಎಂದು ಕೇಳಿದ್ದರು. ಬಾಲಕಿಯ ಮನೆಯಲ್ಲಿ ಟಾಯ್ಲೆಟ್ ಇಲ್ಲದ ಹಿಂಭಾಗದ ಬಚ್ಚಲು ಮನೆಯಲ್ಲಿ ಮೂತ್ರ ವಿಸರ್ಜನೆ ಮಾಡಿದ್ದರು. ಬಳಿಕ ರೂಂಗೆ‌ ಬಂದು ಬಾಲಕಿಯನ್ನು ತನ್ನ ತೊಡೆಯ ಮೇಲೆ ಕೂರಿಸಿಕೊಂಡು ಲೈಂಗಿಕ ಕಿರುಕುಳ ನೀಡಿದ್ದರು. ಬೇರೆ ಯಾರನ್ನಾದರೂ ಮದುವೆಯಾಗು, ಆದ್ರೆ ನನ್ನನ್ನು ಮಾತ್ರ ಪ್ರೀತಿಸು ಅಂತೆಲ್ಲ ಬಾಲಕಿಗೆ ಕಿರುಕುಳ ನೀಡಿದ್ದರು. ಇದರಿಂದ ನೊಂದ ಬಾಲಕಿ ಪೋಷಕರಿಗೆ ತಿಳಿಸಿದ್ದಳು. ಪೊಲೀಸರು ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿಕೊಂಡಿದ್ದರು. ತನಿಖೆ ನಡೆಸಿದ ಮುಂಡರಗಿ ಠಾಣಾ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಆರೋಪಿಯ ಆರೋಪ ರುಜುವಾತಾಗಿದ್ದರಿಂದ ಸದರಿ ಜಿಲ್ಲಾ ನ್ಯಾಯಾಲಯ ಅಪರಾಧಿಗೆ ಶಿಕ್ಷೆ ಪ್ರಕಟಿಸಿದೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಅಮರೇಶ್​ ಉಮಾಪತಿ ವಾದ ಮಂಡಿಸಿದ್ದರು.

ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಬಂಧನ : ಕಳೆದ ಜೂನ್ 19ರಂದು ಬಾಲಕಿ ಮನೆಯ ಮುಂದೆ ಆಟವಾಡುತ್ತಿರುವಾಗ ಆರೋಪಿ ಸಪನ್ ಮಂಡಲ್ ಎಂಬಾತ ಬಾಲಕಿಯನ್ನು ಚಾಕೊಲೇಟ್ ಕೊಡಿಸುವುದಾಗಿ ಪುಸಲಾಯಿಸಿ ತನ್ನ ಸ್ಕೂಟಿಯಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದ. ಬಳಿಕ ಆರೋಪಿಯು ಬಾಲಕಿಯನ್ನು ಮನೆಯಿಂದ ತುಸು ದೂರ ಬಿಟ್ಟು ಪರಾರಿಯಾಗಿದ್ದನು. ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿ ಆಳುತ್ತಾ ಮನೆಗೆ ಬರುತ್ತಿರುವುದನ್ನು ಕಂಡ ಪೋಷಕರು ಗಾಬರಿಗೊಂಡು ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಪೋಷಕರು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಂತರ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ ವೇಳೆ ಅತ್ಯಾಚಾರ ಎಸಗಿರುವ ಬಗ್ಗೆ ಒಪ್ಪಿಕೊಂಡಿದ್ದು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದರು.

ಇದನ್ನೂ ಓದಿ : Rape on minor girl: ಸ್ಕೂಟಿ ಕಲಿಸುವುದಾಗಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರ : ಕಾಮುಕನ ಬಂಧನ

Last Updated : Jun 21, 2023, 9:57 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.