ಗದಗ: ಗದಗ-ಬೆಟಗೇರಿ ಅವಳಿ ನಗರದಲ್ಲಿ 5,123 ಕುಟುಂಬ ಗುಡಿಸಲು, ಶೆಡ್, ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿದ್ದು, ಸೂರಿಲ್ಲದ ಫಲಾನುಭವಿಗಳಿಗೆ ಆದಷ್ಟು ಬೇಗ ಆಶ್ರಯ ಮನೆ ಕಲ್ಪಿಸಲಾಗುವುದು ಎಂದು ಶಾಸಕ ಎಚ್ಕೆ ಪಾಟೀಲ್ ಭರವಸೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರ, ಸ್ಥಳೀಯ ಶಾಸಕರ ನಿಧಿಯಿಂದ ಈ ಮನೆಗಳ ನಿರ್ಮಾಣ ಮಾಡಲಾಗುತ್ತಿದ್ದು, ಒಟ್ಟು 3,600 ಮನೆಗಳನ್ನು ನಿರ್ಮಿಸಲು ನಿರ್ಧರಿಸಲಾಗಿದೆ. ಮೂರು ತಿಂಗಳಲ್ಲಿ 500 ಮನೆಗಳನ್ನು ಮೊದಲ ಹಂತದಲ್ಲಿ ವಿತರಿಸಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.