ಗದಗ : ಇಲ್ಲಿನ ಲಕ್ಷ್ಮೇಶ್ವರ ಸರ್ಕಾರಿ ಆಸ್ಪತ್ರೆಯಲ್ಲಿ ನೆಲದ ಮೇಲೆ ರೋಗಿಗಳಿಗೆ ಚಿಕಿತ್ಸೆ ವಿಚಾರವಾಗಿ ಆರೋಗ್ಯ ಸಚಿವ ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದಾರೆ
ಮಾಧ್ಯಮದೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿರುವ ಇಂತಹ ವ್ಯವಸ್ಥೆಯನ್ನು ಸುಧಾರಣೆ ಮಾಡಬೇಕಿದೆ. ಈಗಾಗಲೇ ರಾಜ್ಯದ ಎಲ್ಲ ಡಿಎಚ್ಓಗಳಿಗೆ ನೆಲದ ಮೇಲೆ ರೋಗಿಗಳಿಗೆ ಚಿಕಿತ್ಸೆ ನೀಡದಂತೆ ಎಚ್ಚರಿಕೆ ನೀಡಿದ್ದೇನೆ. ವೈದ್ಯರ ಕೊರತೆಯಿಂದ ಹೀಗಾಗ್ತಿದ್ದು, ಎರಡು ಸಾವಿರ ವೈದ್ಯರ ನೇರ ನೇಮಕಾತಿ ಪ್ರಕ್ರಿಯೆ ನಡೆದಿದೆ. ಜೊತೆಗೆ ನರ್ಸ್ ಹಾಗೂ ಸ್ಕ್ಯಾನಿಂಗ್, ಎಕ್ಸ್ ರೇ ಟೆಕ್ನೀಷಿಯನ್ ನೇಮಕ ಮಾಡಿಕೊಳ್ಳಲಾಗುತ್ತೆ ಎಂದರು.
ಆಯುರ್ವೇದ ವೈದ್ಯರಿಗೆ ಇಂಗ್ಲಿಷ್ ಔಷಧ ಬಳಕೆ ವಿಚಾರವಾಗಿಯೂ ಮಾತನಾಡಿದ ಅವರು ಆಯುರ್ವೇದ ವೈದ್ಯರು ಮನೆಗೆ ಬಂದಾಗ ಭಾವನಾತ್ಮಕವಾಗಿ ಮಾತನಾಡಿದ್ದೇನೆ. ಅವರು ಇಂಗ್ಲೀಷ್ ಔಷಧಿ ಬಳಕೆ ಮಾಡಲು ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ ಎಂದರು. ನವಂಬರ್ 29 ರಂದು ಲಕ್ಷ್ಮೇಶ್ವರ ಆಸ್ಪತ್ರೆ ಅವ್ಯವಸ್ಥೆ ಕುರಿತು ಮಾಧ್ಯಮಗಳಲ್ಲಿ ವರದಿ ಬಿತ್ತರವಾಗಿತ್ತು.