ಗದಗ : ಆರ್ಟಿಇಯನ್ನು 18 ವಯಸ್ಸಿನವರೆಗೆ ವಿಸ್ತರಿಸಬೇಕು, ಬಾಲಪೂರ್ವ ಶಿಕ್ಷಣ ಕಡ್ಡಾಯಗೊಳಿಸಬೇಕು ಎಂದು ಹಲವು ಬೇಡಿಕೆಗಳನ್ನು ಚುನಾವಣಾ ಪ್ರಣಾಳಿಕೆಯಲ್ಲಿ ಸೇರಿಸುವಂತೆ ಎಸ್ಐಒ ಒತ್ತಾಯ ಮಾಡಿತು.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ಟೂಡೆಂಟ್ ಇಸ್ಲಾಮಿಕ್ ಅರ್ಗನೈಸೇಶನ್ ಆಫ್ ಇಂಡಿಯಾದ ಪ್ರಧಾನ ಕಾರ್ಯದರ್ಶಿ ಡಾ.ನಸೀಮ್,ರಾಷ್ಟ್ರಾದ್ಯಂತ ಇಂದು ವಿದ್ಯಾರ್ಥಿ ಸಮುದಾಯ ಹತ್ತಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಯಾವುದೇ ಸರ್ಕಾರಗಳು ಆ ಸಮಸ್ಯೆಗಳನ್ನು ಬಗೆಹರಿಸಲು ಯತ್ನ ಮಾಡಿಲ್ಲ ಎಂದುಬೇಸರ ವ್ಯಕ್ತಪಡಿಸಿದ್ರು.
ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗಹರಿಸೋ ನಿಟ್ಟಿನಲ್ಲಿ ಹಲವು ವಿಚಾರಗಳುಳ್ಳ ವಿದ್ಯಾರ್ಥಿ ಪ್ರಣಾಳಿಕೆಯನ್ನು ತಯಾರಿಸಿದ್ದು, ಅದರಲ್ಲಿ ಆರ್ಟಿಇ ಕಾಯ್ದೆಯಡಿ ಶಿಕ್ಷಣವನ್ನು 18 ವರ್ಷ ವಯಸ್ಸಿನವರೆಗೂ ವಿಸ್ತರಿಸುವುದೂ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವ ಪ್ರಣಾಳಿಕೆ ಇದಾಗಿದೆ. ಮುಂಬರುವ ಸರ್ಕಾರ ಈ ಎಲ್ಲಾ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದ್ರು.