ETV Bharat / state

ಶೌಚಾಲಯ ಕೊರತೆ: ಗದಗ-ಬೆಟಗೇರಿ ಪೌರಾಯುಕ್ತ ಕಚೇರಿಯಲ್ಲಿ ಮೂತ್ರ ವಿಸರ್ಜನೆ ಮಾಡಿ ಪ್ರತಿಭಟನೆ - Lack of toilet

Sri Ram Sene protest; ಗದಗದಲ್ಲಿ ಮೂತ್ರಾಲಯಗಳ ಸಮಸ್ಯೆಯಿಂದ ಜನ ಹೈರಾಣರಾಗಿದ್ದಾರೆ. ಶೌಚಾಲಯಗಳನ್ನು ನಿರ್ಮಿಸುವಂತೆ ಅಧಿಕಾರಿಗಳಿಗೆ ಮನವಿ ಮಾಡಿದರೂ ಕ್ಯಾರೇ ಎನ್ನುತ್ತಿಲ್ಲ ಎಂದು ಆಕ್ರೋಶಗೊಂಡ ಶ್ರೀರಾಮ ಸೇನೆಯ ಕಾರ್ಯಕರ್ತರು ನಗರಸಭೆ ಪೌರಾಯುಕ್ತರ ಕಚೇರಿಯಲ್ಲಿ ಮೂತ್ರ ವಿಸರ್ಜನೆ ಮಾಡುವ ಮೂಲಕ ಪ್ರತಿಭಟಿಸಿದ್ದಾರೆ.

Sri Ram Sena activists protest in gadag
Sri Ram Sena activists protest in gadag
author img

By

Published : Nov 23, 2021, 2:08 PM IST

Updated : Nov 23, 2021, 3:48 PM IST

ಗದಗ: ಗದಗ-ಬೆಟಗೇರಿ ಅವಳಿ ನಗರದಲ್ಲಿನ ಶೌಚಾಲಯಗಳ ಸಮಸ್ಯೆ ನಿವಾರಿಸಲು ವಿಫಲವಾಗಿರುವ ನಗರಸಭೆ ಅಧಿಕಾರಿಗಳ ಕ್ರಮ ಖಂಡಿಸಿ ಶ್ರೀರಾಮಸೇನೆಯ ನೂರಾರು ಕಾರ್ಯಕರ್ತರು ನಗರಸಭೆ ಪೌರಾಯುಕ್ತರ ಕಚೇರಿಯಲ್ಲಿಯೇ ಮೂತ್ರ ವಿಸರ್ಜನೆ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.

ನಗರದಲ್ಲಿನ ಶೌಚಾಲಯಗಳನ್ನು ಒಡೆದು ಹಾಕಿ ಡಯಾಲಿಸಿಸ್ ಕೇಂದ್ರಗಳಿಗೆ ಹಾಗೂ ಬಯಲು ಶೌಚಕ್ಕೆ ಪ್ರೋತ್ಸಾಹಿಸುತ್ತಿದ್ದಾರೆ ಎಂದು ನಗರಸಭೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ಎರಡು ವರ್ಷಗಳ ಹಿಂದೆ ಅವಳಿ ನಗರದಲ್ಲಿನ ಎಲ್ಲಾ ಮೂತ್ರಾಲಯಗಳನ್ನು ಕೆಡವಿ ಹಾಕಲಾಗಿದೆ. ಮೂತ್ರಾಲಯಗಳನ್ನು ಪುನರ್ ನಿರ್ಮಾಣ ಮಾಡುವುದಾಗಿ ನಗರಸಭೆ ಅಧಿಕಾರಿಗಳು ಹೇಳುತ್ತಾ ಕಾಲಹರಣ ಮಾಡುತ್ತಿದ್ದಾರೆ. ಅಧಿಕಾರಿಗಳ ದುರ್ವರ್ತನೆಯಿಂದ ಅವಳಿ ನಗರದಲ್ಲಿನ ನಾಗರೀಕರು ತೀವ್ರವಾಗಿ ಪರಿತಪಿಸುತ್ತಿದ್ದಾರೆ ಎಂದು ಕಾರ್ಯಕರ್ತರು ಕಿಡಿಕಾರಿದರು.

Last Updated : Nov 23, 2021, 3:48 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.