ETV Bharat / state

ಬಿಜೆಪಿ ಅಲೆ, ಬಿರುಗಾಳಿ, ಸುನಾಮಿಗೆ ಕಾಂಗ್ರೆಸ್ ಕೊಚ್ಚಿಕೊಂಡು ಹೋಗುವುದು ನಿಶ್ಚಿತ: ಸಚಿವ ಶ್ರೀರಾಮುಲು - ಸಿದ್ದರಾಮಯ್ಯ ಹೇಳಿಕೆಗೆ ಶ್ರೀರಾಮುಲು ತಿರುಗೇಟು

2023ರ ವಿಧಾನಸಭಾ ಚುನಾವಣೆವರೆಗೂ ಯಾಕೆ ಎಂಎಲ್​ಸಿ ಎಲೆಕ್ಷನ್​ನಲ್ಲಿಯೇ ಸೋಲು ಅನುಭವಿಸುವ ಮೂಲಕ ಬಿಜೆಪಿಯ ಅಲೆ, ಬಿರುಗಾಳಿ, ಸುನಾಮಿಗೆ ಕಾಂಗ್ರೆಸ್​ ಕೊಚ್ಚಿ ಹೋಗುತ್ತದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಅಲೆ ಎದ್ದಿದೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ (B sriramulu tong against siddaramaiah ) ಹೇಳಿಕೆಗೆ ಸಚಿವ ಶ್ರೀರಾಮುಲು ತಿರುಗೇಟು ನೀಡಿದರು.

sriramulu-react-on-siddaramaiah-statement
ಸಚಿವ ಶ್ರೀರಾಮುಲು
author img

By

Published : Nov 18, 2021, 1:12 PM IST

ಗದಗ: ಅಲೆ, ಬಿರುಗಾಳಿ, ಸುನಾಮಿ ಎಂಬ ಶಬ್ದಗಳು ಕಾಂಗ್ರೆಸ್ ಪಕ್ಷಕ್ಕೆ ಸೇರಿವೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು, (B sriramulu ) ರಾಜ್ಯ ಸರ್ಕಾರದ ವಿರುದ್ಧ ಅಲೆ ಎದ್ದಿದೆ, ಇದರಲ್ಲಿ ಸರ್ಕಾರ ಕೊಚ್ಚಿಕೊಂಡು ಹೋಗುತ್ತದೆ ಎಂಬ ಸಿದ್ರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.

ಇಂದು ನಗರದ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, 2023ರ ವಿಧಾನಸಭಾ ಚುನಾವಣೆವರೆಗೂ ಕಾಯಬೇಕಿಲ್ಲ. ಅವರು ಹೇಳಿದಂತೆ, ಸದ್ಯ ನಡೆಯುತ್ತಿರುವ ಎಂಎಲ್​ಸಿ ಚುನಾವಣೆಯಲ್ಲಿ ಸೋಲು ಅನುಭವಿಸುವ ಮೂಲಕ ಬಿಜೆಪಿ ಅಲೆ, ಬಿರುಗಾಳಿ, ಸುನಾಮಿಯಲ್ಲಿ ಕಾಂಗ್ರೆಸ್ ಕೊಚ್ಚಿಕೊಂಡು ಹೋಗುವುದು ನಿಶ್ಚಿತ ಎಂದು ಭವಿಷ್ಯ ನುಡಿದರು.

ಮನೆಯೊಂದು ಮೂರು ಬಾಗಿಲು: ಮಾಜಿ ಸಿಎಂ ಸಿದ್ದರಾಮಯ್ಯ ಬೂಟಾಟಿಕೆ ನಡೆಸುತ್ತಿದ್ದು, ಅವರ ನಡೆ ನುಡಿ ನೋಡಿದರೆ ಹೊಸ ಟ್ರೆಂಡ್ ಆರಂಭಿಸಿದ್ದಾರೆ. ಅವರು ಹಾವಾಡಿಗರಂತೆ ಮಾತನಾಡುತ್ತಿದ್ದಾರೆ. ಅವರ ನಾಯಕತ್ವವನ್ನು ಸ್ವಪಕ್ಷದವರೇ ಸ್ವೀಕರಿಸಲು ತಯಾರಿಲ್ಲ. ನಿನ್ನೆ ಯಾವುದೋ ಒಂದು ಕಾಂಗ್ರೆಸ್ ಸಮಾರಂಭದಲ್ಲಿ ಜಮೀರ್ ಅಹ್ಮದ್​ಗೆ ಜೈಕಾರ ಹಾಕಿದ್ದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಭಾಷಣ ಮೊಟಕುಗೊಳಿಸಬೇಕಾಯಿತು. ಹೀಗಾಗಿ ಅವರಲ್ಲಿಯೇ ಹೊಂದಾಣಿಕೆ ಇಲ್ಲ. ಸಿದ್ದರಾಮಯ್ಯ, ಡಿಕೆಶಿ, ಪರಮೇಶ್ವರ ಎಂಬ ಮೂರು ಬಣಗಳಿದ್ದು, ಕಾಂಗ್ರೆಸ್ ಮನೆಯೊಂದು ಮೂರು ಬಾಗಿಲಾಗಿದೆ ಎಂದು ವ್ಯಂಗ್ಯವಾಡಿದರು.

ಜನಸ್ವರಾಜ್​ ಯಾತ್ರೆ: ರಾಜ್ಯದ 25 ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಜನಸ್ವರಾಜ್ ಯಾತ್ರೆ ಮೂಲಕ ಬಿಜೆಪಿ ನಾಲ್ಕು ತಂಡಗಳಾಗಿ ಪ್ರಚಾರ ನಡೆಸಲಿದೆ. ಇಂದು ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಯಲ್ಲಾಪುರದಿಂದ, ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಕೊಪ್ಪಳದಿಂದ ಪ್ರಚಾರ ಕಾರ್ಯ ಆರಂಭಿಸಲಾಗುತ್ತಿದೆ ಎಂದು ಸಚಿವ ಶ್ರೀರಾಮುಲು ತಿಳಿಸಿದರು.

ದಾಖಲೆಗಳಿದ್ದರೆ ಬಿಡುಗಡೆ ಮಾಡಬೇಕು: ಬಿಟ್ ಕಾಯಿನ್ ಪ್ರಕರಣವನ್ನು ಸಿಬಿಐ, ’ಇಡಿ’ಗಾ ಅಥವಾ ಎನ್ಪೋರ್ಸ್ ಮೆಂಟ್​​​ಗೆ ಕೊಡಬೇಕೋ ಎಂಬ ಬಗ್ಗೆ ಚರ್ಚೆಯಾಗುತ್ತಿದೆ. ಇದಕ್ಕೆ ಸರ್ಕಾರವೂ ಒಪ್ಪಿಗೆ ನೀಡಲಿದೆ. ಅಲ್ಲದೇ, ಪ್ರಕರಣಕ್ಕೆ ಸಂಬಂಧಿಸಿದಂತೆ ಹ್ಯಾಕರ್​ನನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಎಷ್ಟೇ ದೊಡ್ಡ ವ್ಯಕ್ತಿಗಳಿದ್ದರೂ ಅವರಿಗೆ ತಕ್ಕ ಶಾಸ್ತಿ ಆಗಲಿದೆ. ತಪ್ಪಿತಸ್ಥರು ಪಾತಾಳದಲ್ಲಿ ಅಡಗಿದ್ದರೂ ಅಂತವರನ್ನು ಕರೆ ತರುವ ಶಕ್ತಿ ಸರ್ಕಾರಕ್ಕೆ ಇದೆ.

ಆದರೆ, ಕಾಂಗ್ರೆಸ್ ನಾಯಕರು ಇದನ್ನು ಹೇಳಲು ತಯಾರಿಲ್ಲ. ಬಿಟ್ ಕಾಯಿನ್ ವಿಚಾರಕ್ಕೆ ಸಂಬಂಧಿಸಿದಂತೆ ದಾಖಲೆಗಳಿದ್ದರೆ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಬೇಕು. ವಿನಾಕಾರಣ ಬಿಜೆಪಿ ಮೇಲೆ ಆರೋಪ ಹೊರಿಸುವುದು ಸರಿಯಲ್ಲ. ಕಾಂಗ್ರೆಸ್ ಬಿಜೆಪಿ ಮೇಲೆ ಕೆಸರೆರಚಲು ಮುಂದಾಗುತ್ತಿದೆ. ಮಾಜಿ ಸಿಎಂ ಬಳಕೆ ಮಾಡದ ಪದಗಳನ್ನು ಸಿದ್ದರಾಮಯ್ಯ ಬಳಸುತ್ತಿದ್ದಾರೆ. ಕಾಂಗ್ರೆಸ್ ನವರು ಸತ್ಯಕ್ಕೆ ದೂರವಾದದ್ದನ್ನೇ ಮಾತನಾಡುತ್ತಿದ್ದು, ಕಾಂಗ್ರೆಸ್​ ಒಂದು ಸುಳ್ಳಿನ ಪ್ಯಾಕ್ಟರಿ ಇದ್ದಂತೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.