ಗದಗ: ಪಾಲಕರ ಅಭಿಪ್ರಾಯ ಸಂಗ್ರಹ ಸಭೆ ನೆಪದಲ್ಲಿ ಹರ್ಬಲ್ ಪ್ರಾಡಕ್ಟ್ ಮಾರ್ಕೆಟಿಂಗ್ ಮಾಡಿರುವ ಬಗ್ಗೆ ಗಂಭೀರ ಆರೋಪ ಕೇಳಿಬಂದಿರುವ ಹಿನ್ನೆಲೆ, ಚಿಕ್ಕಟ್ಟಿ ಖಾಸಗಿ ಶಿಕ್ಷಣ ಸಂಸ್ಥೆಗೆ ತಹಶೀಲ್ದಾರ್ ಶ್ರೀನಿವಾಸ್ ಮೂರ್ತಿ ನೋಟಿಸ್ ಜಾರಿ ಮಾಡಿದ್ದಾರೆ.
![Tahsildar issued notice to chikkatti education institute](https://etvbharatimages.akamaized.net/etvbharat/prod-images/kn-gdg-etv-impact-7203292_20062020183641_2006f_1592658401_146.jpg)
ಗದಗ ಹೊರವಲಯದ ಮುಂಡರಗಿ ರಸ್ತೆಯ ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಜೂನ್ 18 ರಂದು ಜಿಲ್ಲಾಡಳಿತದ ಅನುಮತಿ ಪಡೆಯದೆ, ನೂರಾರು ಪಾಲಕರನ್ನ ಸೇರಿಸಿ ಸಭೆ ನಡೆಸಲಾಗಿತ್ತು. ಜೊತೆಗೆ ಪಾಲಕರ ಅಭಿಪ್ರಾಯ ಸಭೆ ನೆಪದಲ್ಲಿ ಹರ್ಬಲ್ ಪ್ರಾಡಕ್ಟ್ ಮಾರ್ಕೆಟಿಂಗ್ ಮಾಡಿರುವ ಬಗ್ಗೆ ಗಂಭೀರ ಆರೋಪ ಕೇಳಿಬಂದಿತ್ತು. ಈ ಕುರಿತು ಶುಕ್ರವಾರ ಮುಂಜಾನೆ ಈಟಿವಿ ಭಾರತ ಸುದ್ದಿ ಪ್ರಸಾರ ಮಾಡಿತ್ತು.
ಚಿಕ್ಕಟ್ಟಿ ಶಿಕ್ಷಣ ಸಂಸ್ಥೆಯಿಂದ ಕೋವಿಡ್ ನಿಯಮ ಉಲ್ಲಂಘನೆ: ಪೋಷಕರ ಸಭೆಯಲ್ಲಿ ನಡೆದಿದ್ದೇನು?
ಇದರಿಂದ ಎಚ್ಚೆತ್ತ ಗದಗ ತಹಶೀಲ್ದಾರ್ ಶ್ರೀನಿವಾಸ್ ಮೂರ್ತಿ, ಕಾರಣ ಕೇಳಿ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದಾರೆ. ಮೂರು ದಿನಗಳಲ್ಲಿ ನೋಟಿಸ್ಗೆ ಲಿಖಿತ ಉತ್ತರ ನೀಡುವಂತೆ ಸೂಚನೆ ನೀಡಿದ್ದಾರೆ. ಒಂದು ವೇಳೆ ಉತ್ತರ ನೀಡದಿದ್ರೆ, ವಿಪತ್ತು ನಿರ್ವಹಣಾ ಕಾಯ್ದೆ 2005 ಕಲಂ 51 ಬಿ ನಿಯಮದಡಿಯಲ್ಲಿ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.