ಗದಗ: ವಿದ್ಯುತ್ ಪ್ರವಹಿಸಿ ಗುತ್ತಿಗೆ ನೌಕರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ರಂಭಾಪುರಿ ನಗರದಲ್ಲಿ ನಡೆದಿದೆ.
ಅಹಮ್ಮದ್ ಷರೀಫ್ ರತನ್ ಖಾನ್ (40) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ವಿದ್ಯುತ್ ಕಂಬ ಏರಿ ದುರಸ್ತಿ ಕಾರ್ಯ ಮಾಡುವಾಗ ವಿದ್ಯುತ್ ಹರಿದು ಘಟನೆ ನಡೆದಿದೆ.
ಮೃತನ ಕುಟುಂಬಸ್ಥರು ಹೆಸ್ಕಾಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.