ಗದಗ: ನೆರೆ ಬಂದು ಎರಡು ತಿಂಗಳು ಕಳೆದರೂ ನೆರೆ ಸಂತ್ರಸ್ತರಿಗೆ ಇನ್ನೂ ಪರಿಹಾರ ಸಿಗದೆ ಅತಂತ್ರ ಸ್ಥಿತಿ ಎದುರಿಸುತ್ತಿದ್ದಾರೆ. ಇದ್ರಿಂದ ಬೇಸತ್ತ ಗ್ರಾಮಸ್ಥರು ತಮ್ಮ ಸಮಸ್ಯೆಗಳ ಸರಮಾಲೆಯನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.
ಬಯಲಲ್ಲೇ ಶೌಚ, ಕುಡಿಯೋಕೆ ನೀರಿಲ್ಲ, ರಾತ್ರಿ ಕತ್ತಲಲ್ಲೇ ಗ್ರಾಮಸ್ಥರು ದಿನ ಕಳೆಯುತ್ತಿದ್ದೇವೆ. ಪರಿಸ್ಥಿತಿ ಹಿಗಿದ್ದರೂ ಬಿಡಿ ಕಾಸೂ ಸಹ ಸರ್ಕಾರದಿಂದ ಪರಿಹಾರ ಸಿಕ್ಕಿಲ್ಲ. ತಾತ್ಕಾಲಿಕ ಶೆಡ್ನಲ್ಲಿ ನಾವು ವಾಸಿಸುತ್ತಿದ್ದು, ಮಕ್ಕಳು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂದು ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳು ವ್ಯವಸ್ಥಿತ ಸೂರು, ಸೌಲಭ್ಯ ಒದಗಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.