ಗದಗ: ಮಲಪ್ರಭಾ ನದಿ ಹಾಗೂ ಬೆಣ್ಣೆಹಳ್ಳ ಪ್ರವಾಹದಿಂದ ಗದಗ ಜಿಲ್ಲೆಯ ನರಗುಂದ ಹಾಗೂ ರೋಣ ತಾಲೂಕಿನ ಹಲವಾರು ಗ್ರಾಮಗಳು ಜಲಾವೃತಗೊಂಡಿವೆ. ಆದರೆ ಕಷ್ಟದ ಪರಿಸ್ಥಿತಿಯಲ್ಲೂ ಸಹ ಕುರಹಟ್ಟಿ ಗ್ರಾಮಸ್ಥರು ಮಾನವೀಯತೆ ಮೆರೆದಿದ್ದಾರೆ.
ಜಿಲ್ಲೆಯಲ್ಲಿ ಪ್ರವಾಹದ ಪರಿಸ್ಥಿತಿ ಹೆಚ್ಚಾಗಿದ್ದು, ಮರದಿಂದ ಕೆಳಗೆ ಬಿದ್ದು ಮೃತಪಟ್ಟಿದ್ದ ಕೋತಿಯ ಅಂತ್ಯಸಂಸ್ಕಾರ ನೆರವೇರಿಸಿದಾರೆ. ರೋಣ ತಾಲೂಕಿನ ಕುರಹಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.