ETV Bharat / state

ಸಿಡಿಲು ಬಡಿದು ಮೂವರ ಸಾವು: ನಾಲ್ವರಿಗೆ ಗಾಯ - ಸಿಡಿಲು ಬಡಿದು ನಾಲ್ವರಿಗೆ ಗಾಯ

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. 44 ವರ್ಷದ ಮಾರುತಿ ಗೋಗಣ್ಣವರ್, 35 ವರ್ಷದ ಶರಣಪ್ಪ ಅಡವಿ ಹಾಗೂ 23 ವರ್ಷದ ಕುಮಾರ್ ಮಾದರ್ ಎಂಬ ರೈತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನುಳಿದ ನಾಲ್ಕು ಜನರಿಗೆ ಗಾಯಗಳಾಗಿದ್ದು, ಶಿರಹಟ್ಟಿ ತಾಲೂಕು ಆಸ್ಪತ್ರೆ ಹಾಗೂ ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Thunderbolt
Thunderbolt
author img

By

Published : Apr 24, 2021, 7:39 PM IST

ಗದಗ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರಿಗೆ ಸಿಡಿಲು ಬಡಿದು ಮೂವರು ಸಾವನ್ನಪ್ಪಿದ್ದು, ನಾಲ್ವರಿಗೆ ಗಾಯಗಳಾಗಿರುವ ಘಟನೆ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕಡಕೋಳ ಬಳಿ ನಡೆದಿದೆ.

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. 44 ವರ್ಷದ ಮಾರುತಿ ಗೋಗಣ್ಣವರ್, 35 ವರ್ಷದ ಶರಣಪ್ಪ ಅಡವಿ ಹಾಗೂ 23 ವರ್ಷದ ಕುಮಾರ್ ಮಾದರ್ ಎಂಬ ರೈತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನುಳಿದ ನಾಲ್ಕು ಜನರಿಗೆ ಗಾಯಗಳಾಗಿದ್ದು, ಶಿರಹಟ್ಟಿ ತಾಲೂಕು ಆಸ್ಪತ್ರೆ ಹಾಗೂ ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಮೂವರಲ್ಲಿ ಇಬ್ಬರು ಕಡಕೋಳ ಗ್ರಾಮದವರಾಗಿದ್ದು, ಓರ್ವ ರೈತ ಶಿರಹಟ್ಟಿ ನಿವಾಸಿ ಎನ್ನಲಾಗುತ್ತಿದೆ. ಮಳೆ, ಗಾಳಿ ಜೋರಾದ ಕಾರಣ ಜಮೀನಿನಲ್ಲಿದ್ದ ಹುಣಸೆ ಮರದ ಕೆಳಗೆ ಆಸರೆ ಪಡೆದಿದ್ದರು. ಈ ವೇಳೆ ಹುಣಸೆ ಮರಕ್ಕೆ ಸಿಡಿಲು ಬಡಿದಿದೆ. ಇನ್ನು ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

ಸ್ಥಳಕ್ಕೆ ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ, ಸಿಪಿಐ, ವಿಕಾಸ ಲಮಾಣಿ ಹಾಗೂ ಕಂದಾಯ ನಿರೀಕ್ಷರು ಭೇಟಿ ನೀಡಿದ್ದಾರೆ. ಗದಗ ಜಿಲ್ಲೆಯ ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಮುಂಡರಗಿ ತಾಲೂಕಿನ ಡೋಣಿ ಗ್ರಾಮದಲ್ಲಿ ತೆಂಗಿನ ಮರಕ್ಕೆ ಸಿಡಿಲು ಬಡಿದಿದೆ. ಮಹಾಂತೇಶ ಹಣಗಿ ಎಂಬುವರ ಮನೆ ಮುಂದಿನ ತೆಂಗಿನ ಮರಕ್ಕೆ ಸಿಡಿಲು ಬಡಿದಿದೆ. ಸಿಡಿಲಿನ ಶಬ್ಧ ಕೇಳಿ ಸ್ಥಳೀಯರು ಕೆಲಕಾಲ ಆತಂಕಕ್ಕೊಳಗಾಗಿದ್ದರು. ಒಟ್ಟಿನಲ್ಲಿ ಜಿಲ್ಲೆಯ ಅನೇಕ ಕಡೆಗಳಲ್ಲಿ ಮಳೆ ಆರ್ಭಟ ಜೋರಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.