ಗದಗ: ನಗರದ ನವೀಕೃತ ಬಸ್ ನಿಲ್ದಾಣದ ಉದ್ಘಾಟನೆಗೆ ಕೊನೆಗೂ ಕಾಲ ಕೂಡಿ ಬಂದಿದ್ದು, ನಾಳೆ ಬಸ್ ನಿಲ್ದಾಣ ಲೋಕಾರ್ಪಣೆಗೊಳ್ಳಲಿದೆ.
ನವೀಕೃತ ಬಸ್ ನಿಲ್ದಾಣಕ್ಕೆ ಸರ್ಕಾರ ಈಗಾಗಲೇ ಪುಟ್ಟರಾಜ ಗವಾಯಿ ಬಸ್ ನಿಲ್ದಾಣ ಎಂದು ಹೆಸರಿಟ್ಟಿದ್ದು, ನಾಳೆ ಸಂಜೆ 4 ಗಂಟೆಗೆ ಲೋಕಾರ್ಪಣೆಯಾಗಲಿದೆ. ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಾದ ಲಕ್ಮಣ್ ಸವದಿ ಬಸ್ ನಿಲ್ದಾಣವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಸಣ್ಣ ಕೈಗಾರಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ಗದಗ ಶಾಸಕ ಹೆಚ್.ಕೆ. ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಈ ಸುದ್ದಿಯನ್ನೂ ಓದಿ: ರಾಜಕೀಯ ಕೆಸರೆರಚಾಟದಲ್ಲಿ ಗದಗ ಬಸ್ ನಿಲ್ದಾಣ ಅನಾಥ: ಸಿಗದ ಉದ್ಘಾಟನಾ ಭಾಗ್ಯ..!
ಜಿಲ್ಲೆಯ ಶಾಸಕರು ಸೇರಿದಂತೆ ಇತರೆ ಜನ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಕೆಎಸ್ಆರ್ಟಿಸಿ ಗದಗ ವಿಭಾಗೀಯ ನಿಯಂತ್ರಣಾಧಿಕಾರಿ ಎಫ್.ಸಿ. ಹಿರೇಮಠ ತಿಳಿಸಿದ್ದಾರೆ.