ETV Bharat / state

ಟ್ರ್ಯಾಕ್ಟರ್ ಪಲ್ಟಿ: ಇಬ್ಬರು ಸ್ಥಳದಲ್ಲೇ ಸಾವು, 7 ಮಂದಿಗೆ ಗಾಯ - ಲಕ್ಷೇಶ್ವರ ತಾಲೂಕಿನ ಗುಂಜಳ ರಸ್ತೆ

ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಮಹಿಳೆಯರು ಸಾವನ್ನಪ್ಪಿ, 7 ಮಂದಿ ಗಾಯಗೊಂಡಿರುವ ಘಟನೆ ಗದಗ ಜಿಲ್ಲೆಯ ಲಕ್ಷೇಶ್ವರ ತಾಲೂಕಿನ ಗುಂಜಳ ರಸ್ತೆಯಲ್ಲಿ ನಡೆದಿದೆ.

Gadag
ಟ್ರ್ಯಾಕ್ಟರ್ ಪಲ್ಟಿ: ಇಬ್ಬರು ಸ್ಥಳದಲ್ಲೇ ಸಾವು, 7 ಮಂದಿಗೆ ಗಾಯ
author img

By

Published : Feb 25, 2021, 1:11 PM IST

ಗದಗ: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದು, 7 ಮಂದಿ ಗಾಯಗೊಂಡಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗುಂಜಳ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ.

ಟ್ರ್ಯಾಕ್ಟರ್ ಪಲ್ಟಿ: ಇಬ್ಬರು ಸ್ಥಳದಲ್ಲೇ ಸಾವು, 7 ಮಂದಿಗೆ ಗಾಯ

ಲಕ್ಷ್ಮೇಶ್ವರ ಪಟ್ಟಣದ ನಿವಾಸಿಗಳಾದ ಸರೋಜವ್ವ ಹಿತ್ತಲಮನಿ (40) ಹಾಗೂ ಸೋಮವ್ವಾ ಅಡುಗೆಮನೆ (48) ಮೃತ ಮಹಿಳೆಯರು. ದುರಗವ್ವ ದೂಳಮ್ಮನವರ, ಬಸಮ್ಮ ಗಡದವರ, ಗಂಗವ್ವ ಹೊಸಮನಿ, ಬಸವ್ವ ಸಂದಿಮನಿ, ಶೋಭಕ್ಕ ದೂಳಮ್ಮನವರ, ಸುಂದರವ್ವ ಗಡದವರ ಹಾಗೂ ಯಲ್ಲವ್ವ ಬೂದಿಹಾಳ ಗಾಯಗೊಂಡವರಾಗಿದ್ದಾರೆ.

ಇಂದು ಬೆಳಗ್ಗೆ ಕಡಲೆ ಬೆಳೆ ಕಿತ್ತು ಟ್ರ್ಯಾಕ್ಟರ್​ನಲ್ಲಿ ಹೇರಿಕೊಂಡು ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್​ ಪಲ್ಟಿಯಾಗಿದೆ ಎನ್ನಲಾಗ್ತಿದೆ. ಸದ್ಯ ಗಾಯಾಳುಗಳನ್ನು ಚಿಕಿತ್ಸೆಗಾಗಿ ಲಕ್ಷ್ಮೇಶ್ವರ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಸಂಬಂಧ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓದಿ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಮೂವರ ದುರ್ಮರಣ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.