ಗದಗ: ಜಮೀನು ಕೆಲಸ ಮುಗಿಸಿ ಮನೆಗೆ ಮರಳುವ ವೇಳೆ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಮೃತ ಪಟ್ಟ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಚಿಕ್ಕ ನರಗುಂದ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಶಿವಾನಂದ(18), ಮಲ್ಲಿಕಾರ್ಜುನ ( 20) ಮೃತ ದುರ್ದೈವಿಗಳು. ಮೃತರಿಬ್ಬರೂ ಚಿಕ್ಕನರಗುಂದ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ. ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಇದರಿಂದ ಅದರ ಮಧ್ಯೆ ಸಿಲುಕಿ ಇಬ್ಬರೂ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ನರಗುಂದ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.