ಗದಗ: ಸಾರಿಗೆ ನೌಕರರ ಮುಷ್ಕರದ ನಡುವೆಯೇ ಕರ್ತವ್ಯಕ್ಕೆ ಹಾಜರಾಗಬೇಕೆಂಬ ಹಿರಿಯ ಅಧಿಕಾರಿಗಳ ಒತ್ತಡಕ್ಕೆ ನೊಂದು ಚಾಲಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ವಸಂತ ರಾಮದುರ್ಗ(48) ಆತ್ಮಹತ್ಯೆಗೆ ಯತ್ನಿಸಿದ ಬಸ್ ಚಾಲಕ. ಇವರು ಜಿಲ್ಲಾ ಸಾರಿಗೆ ನೌಕರರ ಸಂಘದ ಮುಖ್ಯಸ್ಥರಾಗಿದ್ದು, ಮೂಲತಃ ಕದಡಿ ಗ್ರಾಮದವರಾಗಿದ್ದಾರೆ. ಸದ್ಯ ಹುಡ್ಕೊ ಕಾಲೋನಿಯಲ್ಲಿ ಕುಟುಂಬ ಸಮೇತ ವಾಸವಾಗಿದ್ದಾರೆ.
ಇದನ್ನೂ ಓದಿ: ವಿಮಾನ ಹಾರಾಟದ ವೇಳೆ ಜನಿಸಿದ ಮಗುವಿಗೆ ಸಿಗುತ್ತಿಲ್ಲ ಜನನ ಪ್ರಮಾಣ ಪತ್ರ
ಚಾಲಕನಿಗೆ ಸಂಸ್ಥೆಯ ಹಿರಿಯ ಅಧಿಕಾರಿಗಳು ಮೇಲಿಂದ ಮೇಲೆ ಕರ್ತವ್ಯಕ್ಕೆ ಹಾಜರಾಗುವಂತೆ ಒತ್ತಡ ಹೇರುತ್ತಿದ್ದರು ಎಂದು ಆರೋಪಿಸಲಾಗಿದೆ.
ಚಾಲಕನನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.