ETV Bharat / state

ಎಸ್ಎಸ್ಎಲ್​​ಸಿ ವಿದ್ಯಾರ್ಥಿಗಳಿಗೆ ಲಾರಿ ಡಿಕ್ಕಿ: ಒಬ್ಬ ವಿದ್ಯಾರ್ಥಿ ಸಾವು, ಇಬ್ಬರ ಸ್ಥಿತಿ ಚಿಂತಾಜನಕ..!

ಪರೀಕ್ಷಾ ಕೇಂದ್ರದಿಂದ ಪರೀಕ್ಷೆ ಮುಗಿಸಿ ವಿದ್ಯಾರ್ಥಿಗಳು ವಾಪಸ್ ಊರಿಗೆ ತೆರಳುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಒಬ್ಬ ವಿದ್ಯಾರ್ಥಿ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.

Truck lorry collides with students in gadag
ಪರೀಕ್ಷೆ ಮುಗಿಸಿ‌ ಹೊರಟಿದ್ದ ವಿದ್ಯಾರ್ಥಿಗಳಿಗೆ ಲಾರಿ ಡಿಕ್ಕಿ
author img

By

Published : Jun 25, 2020, 3:45 PM IST

Updated : Jun 25, 2020, 5:44 PM IST

ಗದಗ: ಎಸ್ಎಸ್ಎಲ್​​ಸಿ ಪರೀಕ್ಷೆ ಮುಗಿಸಿ‌ ಬೈಕ್​​​ನಲ್ಲಿ ತಮ್ಮೂರಿಗೆ ಹೊರಟಿದ್ದ ವಿದ್ಯಾರ್ಥಿಗಳಿಗೆ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಹತ್ತಿರ ಈ ಘಟನೆ ನಡೆದಿದ್ದು, ಅಪಘಾತದಲ್ಲಿ ಸಿದ್ದಪ್ಪ ತಳವಾರ ಎಂಬ ವಿದ್ಯಾರ್ಥಿ ಸಾವನ್ನಪ್ಪಿದ್ದು, ಈರಣ್ಣ ಬಡಿಗೇರ ಹಾಗೂ ಮೈಲಾರಿ ಯಳವತ್ತಿ ಎಂಬ ವಿದ್ಯಾರ್ಥಿಗಳು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.

ಪರೀಕ್ಷೆ ಮುಗಿಸಿ‌ ಹೊರಟಿದ್ದ ವಿದ್ಯಾರ್ಥಿಗಳಿಗೆ ಲಾರಿ ಡಿಕ್ಕಿ

ಮುಂಡರಗಿ ತಾಲೂಕಿನ ಕಲಕೇರಿ‌ ಪರೀಕ್ಷಾ ಕೇಂದ್ರದಿಂದ ಪರೀಕ್ಷೆ ಮುಗಿಸಿ ವಾಪಾಸ್ ಊರಿಗೆ ತೆರಳುತ್ತಿದ್ದರು. ಈ ವೇಳೆ ಎದುರಿಗೆ ಬರುತ್ತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Last Updated : Jun 25, 2020, 5:44 PM IST

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.