ETV Bharat / state

ಗದಗದಲ್ಲಿ ಮತ್ತಿಬ್ಬರಿಗೆ ಕೊರೊನಾ: ಸೋಂಕಿತರ ಸಂಖ್ಯೆ 37ಕ್ಕೆ ಏರಿಕೆ - Gadag Latest Corona up date

ಇಂದು ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ.

DC M. G. Hiremath
ಜಿಲ್ಲಾಧಿಕಾರಿ ಎಂ. ಜಿ. ಹಿರೇಮಠ
author img

By

Published : Jun 4, 2020, 7:45 PM IST

ಗದಗ: ಜಿಲ್ಲೆಯಲ್ಲಿ ಇಂದು ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿರುವುದಾಗಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೆಲ್ತ್ ಬುಲೆಟಿನ್​ನಲ್ಲಿ ತಿಳಿಸಿದ್ದಾರೆ.

P-4079 ಹಾಗೂ P-4082ಗೆ ಸೋಂಕು ಇರುವುದು ದೃಢಪಟ್ಟಿದೆ. P-4079 ರೋಗಿ ಗದಗ ನಗರದ ಉಡ್ಕೋ ಕಾಲೋನಿಯ ನಿವಾಸಿಯಾಗಿದ್ದು, ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರ ಹಿನ್ನೆಲೆಯಲ್ಲಿ ಸೋಂಕು ತಗುಲಿದೆ. ಇವರು ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಹೋಗಿದ್ದರು. ಬೆಂಗಳೂರಿ‌ನಲ್ಲಿ ಚಿಕಿತ್ಸೆ ಪಡೆಯುವ ವೇಳೆ ಅವರನ್ನು ಕೊರೊನಾ ಟೆಸ್ಟ್​ಗೆ ಒಳಪಡಿಸಿದ್ದು, ಸೋಂಕು ಇರುವುದು ದೃಢಪಟ್ಟಿದೆ. ಇನ್ನು ಈ ರೋಗಿಯ ಪತ್ನಿಯನ್ನೂ ಸಹ ಬೆಂಗಳೂರಿನಲ್ಲಿ ಕ್ವಾರಂಟೈನ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

P-4082 ಲಕ್ಕುಂಡಿ ಗ್ರಾಮದ ವ್ಯಕ್ತಿಯಾಗಿದ್ದು, ಡಯಾಬಿಟಿಸ್​ನಿಂದ ಬಳಲುತ್ತಿದ್ದರು‌. ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡದ ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಈ ವೇಳೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು.‌ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದರು. ಅದಾದ ಬಳಿಕ ಕೊವಿಡ್-19 ವಿಪತ್ತು ನಿರ್ವಹಣೆ ಮಾರ್ಗಸೂಚಿ ಪ್ರಕಾರ ಅಂತ್ಯ ಸಂಸ್ಕಾರ ಸಹ ಮಾಡಲಾಗಿತ್ತು. ಸದ್ಯ ಲಕ್ಕುಂಡಿ ಗ್ರಾಮವನ್ನು ಸಂಪೂರ್ಣವಾಗಿ ಸೀಲ್​ ಡೌನ್​ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 37ಕ್ಕೆ ಏರಿಕೆಯಾಗಿದ್ದು, ಇವರಲ್ಲಿ ಇಬ್ಬರು ಮೃತಪಟ್ಟಿದ್ದಾರೆ. 17 ಜನರು ಗುಣಮಖರಾಗಿದ್ದು, 18 ಕೊರೊನಾ ಸಕ್ರಿಯ ಪ್ರಕರಣಗಳ ಪೈಕಿ 17 ಜನ ಜಿಮ್ಸ್​ನ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಪಾಸಿಟಿವ್ ಬಂದ ವ್ಯಕ್ತಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.