ETV Bharat / state

ಗದಗ: ಪ್ರವಾಸಕ್ಕೆ ಬಂದ ಇಬ್ಬರು ವಿದ್ಯಾರ್ಥಿಗಳು ನದಿನೀರು ಪಾಲು

ಇಂದು ಬೆಳಗ್ಗೆ ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆಂದು ಹೋದಾಗ ನೀರಿನ ಆಳ ತಿಳಿಯದೆ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿದ್ದಾರೆ.

two-students-died-in-river-at-gadaga
ಪ್ರವಾಸಕ್ಕೆ ಬಂದ ಇಬ್ಬರು ವಿದ್ಯಾರ್ಥಿಗಳು ನದಿ ಪಾಲು
author img

By

Published : Mar 1, 2022, 7:12 PM IST

ಗದಗ : ಪ್ರವಾಸಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿಗಳು ತುಂಗಭದ್ರಾ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಮುಂಡರಗಿ ತಾಲೂಕಿನ ಸಿಂಗಟಾಲೂರು ವೀರಭದ್ರೇಶ್ವರ ದೇವಸ್ಥಾನ ಬಳಿಯ ನದಿಯಲ್ಲಿ ಅವಘಡ ನಡೆದಿದೆ. ರಾಯಚೂರು ಮೂಲದ ಶರಣಗೌಡ (15), ಹೊಸಪೇಟೆ ಮೂಲದ ಅಖಿಲೇಶ್ (15) ನೀರುಪಾಲಾದ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ.

ಪ್ರವಾಸಕ್ಕೆ ಬಂದ ಇಬ್ಬರು ವಿದ್ಯಾರ್ಥಿಗಳು ನದಿ ಪಾಲು

ಓರ್ವ ವಿದ್ಯಾರ್ಥಿ ಸ್ವಲ್ಪದರಲ್ಲೇ ಬಚಾವ್ ಆಗಿದ್ದಾನೆ. ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿಯ ಖಾಸಗಿ ಶಾಲೆಯ ಸುಮಾರು 40 ವಿದ್ಯಾರ್ಥಿಗಳನ್ನು ಶಿಕ್ಷಕರು ದೇವಸ್ಥಾನಕ್ಕೆಂದು ಪ್ರವಾಸಕ್ಕೆ ಕರೆದುಕೊಂಡು ಬಂದಿದ್ದರು.

ಬೆಳಗ್ಗೆ ನದಿಯಲ್ಲಿ ಸ್ನಾನ ಮಾಡಲು ಹೋದಾಗ ನೀರಿನ ಆಳ ತಿಳಿಯದೆ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿದ್ದಾರೆ. ಇದರಲ್ಲಿ ಒಬ್ಬ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. ಇನ್ನೋರ್ವ ವಿದ್ಯಾರ್ಥಿ ಶವಕ್ಕಾಗಿ ಹುಡುಕಾಟ ನಡೆಸಲಾಗಿದೆ. ಸ್ಥಳಕ್ಕೆ ಮುಂಡರಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲಲ್ಲಿ ಮೊದಲ ದಿನದ ಅರ್ಧ ಪಾದಯಾತ್ರೆ ಮುಕ್ತಾಯ.. ಕತ್ರಿಗುಪ್ಪೆ ತಲುಪಿದ ಕಾಂಗ್ರೆಸ್ ನಾಯಕರು..

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.