ಗದಗ: ಜಿಲ್ಲೆಯ ರೋಣ ಪಟ್ಟಣದಲ್ಲಿ ತಡರಾತ್ರಿ ದೇವಾಲಯದಲ್ಲಿ ಸರಣಿ ಕಳ್ಳತನ ನಡೆದಿದೆ. ಇಲ್ಲಿನ ಐತಿಹಾಸಿಕ ವೀರಭದ್ರೇಶ್ವರ ದೇವಸ್ಥಾನದ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಮಧ್ಯರಾತ್ರಿ ದೇವಾಲಯದ ಬೀಗ ಮುರಿದು 2 ಕೆ.ಜಿ ಬೆಳ್ಳಿ ಕಿರೀಟ, 2 ಬೆಳ್ಳಿಯ ಬೆತ್ತ ಹಾಗು 1 ಬಂಗಾರ ಲೇಪಿತ ಕಳಸ ಕದ್ದೊಯ್ದಿದ್ದಾರೆ.
ರೋಣ ತಾಲೂಕಿನ ಬೆಳವಣಕಿ ಗ್ರಾಮದ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿಯೂ ಕಳ್ಳತನ ನಡೆದಿದೆ. ಈ ಕುರಿತ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜೊತೆಗೆ ಬೆರಳಚ್ಚು ತಜ್ಞರು, ಶ್ವಾನದಳ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಉಳ್ಳಾಲ: ಗೋಡೆ ಕೊರೆದು ಲಕ್ಷಾಂತರ ಬೆಲೆಬಾಳುವ ಚಿನ್ನ ದರೋಡೆ