ಗದಗ: ಜಿಲ್ಲೆಯಲ್ಲಿ ಹೊಸದಾಗಿ 169 ಜನ ಸೇರಿ ಒಟ್ಟು 1,918 ಜನರ ಮೇಲೆ ನಿಗಾವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ.
ಅದರಲ್ಲಿ 28 ದಿನಗಳ ಕ್ವಾರಂಟೈನ್ ಪೂರೈಸಿದ 329, ಮನೆಯಲ್ಲಿಯೇ ಪ್ರತ್ಯೇಕ ನಿಗಾದಲ್ಲಿರುವ 1,567 ಹಾಗೂ ಆಸ್ಪತ್ರೆಯಲ್ಲಿ ಪ್ರತ್ಯೇಕ ನಿಗಾದಲ್ಲಿ 22 ಜನರಿದ್ದಾರೆ ಎಂದು ತಿಳಿಸಿದ್ದಾದೆ. ಇನ್ನು, ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಿದ 2,014 ಮಾದರಿಗಳಿದ್ದು,ಇದರಲ್ಲಿ 1,555 ನೆಗಟಿವ್ ಬಂದಿದೆ.
ಜಿಲ್ಲೆಯಲ್ಲಿ ಒಟ್ಟು 5 ಕೋವಿಡ್-19 ಪ್ರಕರಣಗಳು ಧೃಢಪಟ್ಟಿವೆ. ಈ ಪೈಕಿ ಪಿ-166 ಕಾರ್ಡಿಯಾಕ್ ಅರೆಸ್ಟ್ನಿಂದ ಮೃತಪಟ್ಟಿದ್ದರು. ಪಿ-304 ವ್ಯಕ್ತಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ ಎಂದರು.