ಗದಗ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯತಿ ನೌಕರರ ಸಂಘದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ನೌಕರರು, ಹಲವು ತಿಂಗಳಿಂದ ಬಾಕಿ ಉಳಿಸಿಕೊಂಡ ವೇತನ ಪಾವತಿ, ಹುದ್ದೆಗಳ ಮುಂಬಡ್ತಿ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕೊರೊನಾ ಸಂಕಷ್ಟದಲ್ಲೂ ಪ್ರಾಣದ ಹಂಗು ತೊರೆದು ನಾವು ಗ್ರಾಮಗಳ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದೇವೆ. ಆದರೆ, ಸರ್ಕಾರ ಸರಿಯಾಗಿ ಸಂಬಳ ನೀಡುತ್ತಿಲ್ಲ. 15 ತಿಂಗಳ ಗ್ರಾಚ್ಯೂಟಿ ಬಂದಿಲ್ಲ. ಜೊತೆಗೆ ಯಾವುದೇ ಹುದ್ದೆಗಳ ಬಡ್ತಿ ಸಹ ಆಗಿಲ್ಲ ಎಂದು ಆರೋಪಿಸಿದರು.