ಗದಗ: 2 ವರ್ಷದ ಮಗುವಿನೊಂದಿಗೆ ತಾಯಿಯೊಬ್ಬಳು ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ತಾಲೂಕಿನ ಹುಯಿಲಗೋಳ ಗ್ರಾಮದಲ್ಲಿ ನಡೆದಿದೆ.
ಹುಲಿಗೆವ್ವ (28) ಮತ್ತು ಮಗ ನಿಂಗಪ್ಪ (2) ಮೃತ ದುರ್ದೈವಿಗಳು. ಘಟನೆಗೆ ಕೌಟುಂಬಿಕ ಕಲಹ ಕಾರಣ ಎನ್ನಲಾಗಿದ್ದು ಗಂಡ, ಅತ್ತೆ ಹಾಗೂ ಗಂಡನ ಸಹೋದರ ಮಾನಸಿಕ ಕಿರುಕುಳ ನೀಡುತ್ತಿದ್ದರು. ಇದರಿಂದ ಮಾನಸಿಕ ಖಿನ್ನತೆಗೆ ಒಳಗಾದ ಹುಲಿಗೆವ್ವ ಮಗುವನ್ನು ಸೀರೆಗೆ ಕಟ್ಟಿಕೊಂಡು ಕೃಷಿ ಹೊಂಡಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಗದಗ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಗಂಡ, ಆತನ ತಾಯಿ ಹಾಗೂ ಸಹೋದರನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.