ಗದಗ : ತಾಲೂಕಿನ ಮುಳಗುಂದ ಸಮೀಪದ ಶಿರುಂಜ ಗ್ರಾಮದ ಮನೆಯೊಂದರಲ್ಲಿ ಗೃಹಿಣಿಯೊಬ್ಬಳ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದ್ದು, ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.
ಗ್ರಾಮದ ಮಲ್ಲಮ್ಮ ನಿಂಗಪ್ಪ ಹುಡೇದ (35) ಮೃತ ಗೃಹಿಣಿ ಎಂದು ಗುರುತಿಸಲಾಗಿದೆ. ಪತ್ನಿ ಸಾವಿನ ಬಳಿಕ ಪತಿ ನಿಂಗಪ್ಪ ನಾಪತ್ತೆಯಾಗಿದ್ದು, ಅನುಮಾನಕ್ಕೆ ಕಾರಣವಾಗಿದೆ.
ಓದಿ-ಯುವಕರ ಹಳೆ ದ್ವೇಷ ಹತ್ಯೆಯಲ್ಲಿ ಅಂತ್ಯ.. ಗ್ರಾಮಗಳ ಮಧ್ಯೆ ಮಾರಾಮಾರಿ
ಸ್ಥಳಕ್ಕೆ ಗದಗ ಗ್ರಾಮೀಣ ಸಿಪಿಐ ರವಿಕುಮಾರ ಕಪ್ಪತನವರ, ಮುಳಗುಂದ ಠಾಣಾ ಪಿಎಸ್‌ಐ ಸಚಿನ್ ಅಲಮೇಲಕರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾವಿನ ಕುರಿತು ನಿಖರ ಕಾರಣ ತನಿಖೆ ನಂತರ ತಿಳಿದು ಬರಬೇಕಿದೆ.