ETV Bharat / state

'ಪೂರ್ಣ ಅವಧಿಗೆ ಯಡಿಯೂರಪ್ಪ ಅವರೇ ಸಿಎಂ': ಡಿಸಿಎಂ ಕಾರಜೋಳ

ಇನ್ನೂ ಎರಡೂವರೆ ವರ್ಷ ಯಡಿಯೂರಪ್ಪ ಅವರೇ ರಾಜ್ಯದ ಸಿಎಂ ಆಗಿರುತ್ತಾರೆ. ಹಾಗಾಗಿ ನಾಯಕತ್ವ ಬದಲಾವಣೆ ಇಲ್ಲ ಎಂದು ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದ್ದಾರೆ.

DCM Govinda Karajola
ಡಿಸಿಎಂ ಗೋವಿಂದ ಕಾರಜೋಳ
author img

By

Published : Jan 11, 2021, 1:10 PM IST

ಗದಗ: ಪೂರ್ಣ ಅವಧಿಗೆ ಬಿ.ಎಸ್​. ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಸಚಿವ ‌ಗೋವಿಂದ ಕಾರಜೋಳ ಸ್ಪಷ್ಟಪಡಿಸಿದ್ದಾರೆ.

ಪೂರ್ಣ ಅವಧಿಗೆ ಯಡಿಯೂರಪ್ಪ ಅವರೇ ಸಿಎಂ : ಡಿಸಿಎಂ ಕಾರಜೋಳ

ನಗರದಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇನ್ನೂ ಎರಡೂವರೆ ವರ್ಷ ಯಡಿಯೂರಪ್ಪ ಅವರೇ ರಾಜ್ಯದ ಸಿಎಂ ಆಗಿರುತ್ತಾರೆ. ಹಾಗಾಗಿ ನಾಯಕತ್ವ ಬದಲಾವಣೆ ಇಲ್ಲ. ಸಿಎಂ ಬದಲಾವಣೆ ಕೇವಲ ಮಾಧ್ಯಮಗಳ ಸೃಷ್ಟಿ. ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದರು.

ಓದಿ: ಸಿಎಂ ಬದಲಾವಣೆ ವಿಚಾರ: ಸಿದ್ದರಾಮಯ್ಯ, ನೀವು ಕುಳಿತುಕೊಂಡು ಡಿಸೈಡ್ ಮಾಡಿ ಎಂದ ಬಿಎಸ್​ವೈ

ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿ, ಸಿಎಂ ಅವರು ಜ.13 ಅಥವಾ 14 ರಂದು ಸಚಿವ ಸಂಪುಟ ವಿಸ್ತರಣೆಯೋ ಅಥವಾ ಪುನರ್ ರಚನೆಯೋ ಅಂದೇ ಗೊತ್ತಾಗಲಿದೆ. ಅಲ್ಲಿಯವರೆಗೆ ಕಾದು ನೋಡಿ. ಇನ್ನು ಯಾವುದೇ ಗೊಂದಲವಿಲ್ಲದೆ ಸಚಿವ ಸಂಪುಟ ವಿಸ್ತರಣೆ ಆಗುತ್ತದೆ. ಎಲ್ಲರೂ ಒಗ್ಗಟ್ಟಾಗಿ ಇದ್ದೇವೆ, ನಮ್ಮಲ್ಲಿ ಯಾವುದೇ ಗೊಂದಲವಿಲ್ಲ. ನಮ್ಮ ಸರ್ಕಾರ ಸುಭದ್ರವಾಗಿದೆ ಎಂದು ಡಿಸಿಎಂ ಕಾರಜೋಳ ವಿಶ್ವಾಸ ವ್ಯಕ್ತಪಡಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.