ಗದಗ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವನಿಗೆ ಹಾವು ಕಡಿದು ಸಾವನ್ನಪ್ಪಿದ್ದು, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಮುಖ್ಯ ಕಾರಣ ಎಂದು ಆರೋಪಿಸಿ ಮೃತನ ಪೋಷಕರು ಹಾಗೂ ಸ್ಥಳೀಯರು ಪ್ರತಿಭಟನೆ ನಡೆಸಿರುವ ಘಟನೆ ಗಜೇಂದ್ರಗಡದಲ್ಲಿ ನಡೆದಿದೆ.
ಸಕಾಲದಲ್ಲಿ ಸೂಕ್ತ ಚಿಕಿತ್ಸೆ ನೀಡುವಲ್ಲಿ ವೈದ್ಯಾಧಿಕಾರಿಗಳು ವಿಫಲವಾಗಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ಯುವಕ ಸಾವನಪ್ಪಿದ್ದಾನೆ ಎಂದು ಆರೋಪಿಸಿ ಕುಟುಂಬಸ್ಥರು ಪ್ರತಿಭಟನೆ ಕೂಡ ನಡೆಸಿದ್ದಾರೆ.
ಶಿವಾಜಿಪೇಟೆ ನಿವಾಸಿ ಹೊನ್ನಪ್ಪ ಶರಣಪ್ಪ ಹೂಗಾರ (25) ಮೃತರಾದವರು. ಸಮೀಪದ ಉಣಚಗೇರಿ ಗ್ರಾಮದ ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಹಾವು ಕಚ್ಚಿದೆ. ತಕ್ಷಣವೇ ಗಜೆಂದ್ರಗಡ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತಂದಿದ್ದಾರೆ. ಅದರೆ, ಯುವಕನಿಗೆ ಸರಿಯಾದ ಚಿಕಿತ್ಸೆ ಕೊಡದೆ ಗದಗ ಜಿಲ್ಲಾ ಆಸ್ಪತ್ರೆಗೆ ರವಾನಿಸಲು ಹೇಳಿದ್ದಾರೆ.
ಯುವಕ ಮಾರ್ಗ ಮದ್ಯದಲ್ಲಿ ಸಾವನಪ್ಪಿದ್ದು, ಸ್ಥಳೀಯರು ಆಸ್ಪತ್ರೆ ವೈದ್ಯರ ವಿರುದ್ದ ಅಕ್ರೊಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ. ತಕ್ಷಣವೇ ವೈದ್ಯರು ಮತ್ತು ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಜರಗಿಸುವಂತೆ ಆಗ್ರಹಿಸಿದ್ದಾರೆ.