ETV Bharat / state

ಗಾಳಿಪಟದ ಅಪಾಯಕಾರಿ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಗದಗದಲ್ಲಿ ಯುವಕ ಬಲಿ - ಮಾಂಜಾ ದಾರಕ್ಕೆ ಕುತ್ತಿಗೆಗೆ ಸಿಲುಕಿ ಯುವಕ ಬಲಿ

ಗಾಳಿಪಟದ ದಾರ ಕುತ್ತಿಗೆಗೆ ಸಿಲುಕಿ ಯುವಕ ಮೃತಪಟ್ಟ ಘಟನೆ ಗದಗದಲ್ಲಿ ನಡೆದಿದೆ.

young-man-died-from-manja-string-of-kite-in-gadag
ಗಾಳಿಪಟದ ಅಪಾಯಕಾರಿ ಮಾಂಜಾ ದಾರಕ್ಕೆ ಕುತ್ತಿಗೆಗೆ ಸಿಲುಕಿ ಯುವಕ ಬಲಿ!
author img

By

Published : Jun 9, 2023, 9:43 PM IST

ಗದಗ: ಗಾಳಿಪಟದ ದಾರ ಕತ್ತಿಗೆ ಸಿಲುಕಿ ಯುವಕನೊಬ್ಬ ಮೃತಪಟ್ಟಿರುವ ದಾರುಣ ಘಟನೆ ನಗರದಲ್ಲಿ ವರದಿಯಾಗಿದೆ. ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ನಾರಾಯಣ ದೇವರಕೆರೆ ನಿವಾಸಿ ರವಿ ಮೃತ ಯುವಕ ಎಂದು ಗುರುತಿಸಲಾಗಿದೆ. ಇಲ್ಲಿನ ಡಂಬಳ ನಾಕಾ ಬಳಿ ಕಳೆದ ಭಾನುವಾರ ಖಾರ ಹುಣ್ಣಿಮೆಯಂದು ಬೈಕ್‌ನಲ್ಲಿ ಹೋಗುವಾಗ ಗಾಳಿಪಟದ ದಾರ (ಮಾಂಜಾ ದಾರ) ಯುವಕನ ಕತ್ತು ಸೀಳಿತ್ತು. ಗಂಭೀರವಾಗಿ ಗಾಯಗೊಂಡಿದ್ದ ರವಿಯನ್ನು ಗದಗದ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಕಳೆದ ಆರು ದಿನಗಳ ಜೀವನ್ಮರಣದ ಹೋರಾಟದಲ್ಲಿ ಯುವಕ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಅಪಾಯಕಾರಿ ಮಾಂಜಾ ದಾರವನ್ನು ನಿಷೇಧ ಮಾಡಿದ್ದರೂ ಅಲ್ಲಲ್ಲಿ ಅಕ್ರಮವಾಗಿ ಮಾರಾಟ ಮತ್ತು ಬಳಕೆ ಮಾಡುತ್ತಿರುವುದು ಕಂಡು ಬರುತ್ತಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕು. ಗಾಳಿಪಟದ ದಾರಕ್ಕೆ ಅಮಾಯಕ ಯುವಕ ಬಲಿಯಾಗಿರುವುದಕ್ಕೆ ಯಾರು ಹೊಣೆ? ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಗದಗ ಶಹರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮದ್ಯದೊಂದಿಗೆ ‌ವಿಷ ಸೇವಿಸಿ ಪ್ರಾಣ ಸ್ನೇಹಿತರ ಆತ್ಮಹತ್ಯೆ ಯತ್ನ, ಓರ್ವ ಸಾವು: ಇಬ್ಬರು ಆತ್ನೀಯ ಸ್ನೇಹಿತರು ಮದ್ಯದ ಜೊತೆಗೆ ವಿಷದ ಮಾತ್ರೆ ಬೆರೆಸಿ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಸಮೀಪ ಗುರುವಾರ ನಡೆದಿದೆ. ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದ ಮನು (19) ಹಾಗೂ ಇತ್ತಲ ದೊಡ್ಡಿ ಗ್ರಾಮದ ಆನಂದ್ ಅಲಿಯಾಸ್​ ನಾಗೇಂದ್ರ ಆತ್ಮಹತ್ಯೆಗೆ ಯತ್ನಿಸಿದವರು. ಇವರಲ್ಲಿ ನಾಗೇಂದ್ರ ಎಂಬಾತ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಮನು ಎಂಬಾತನ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ನಾಗೇಂದ್ರ ಹಾಗೂ ಮನು ಪ್ರಾಣ ಸ್ನೇಹಿತರು. ಜೊತೆಯಲ್ಲೇ ವಿದ್ಯಾಭ್ಯಾಸ ಮಾಡುತ್ತಿದ್ದರು. ನಾಗೇಂದ್ರನ ಕೈಯಲ್ಲಿ ಮನು ಎಂಬ ಹೆಸರು ಹಾಗೂ ಮನು ಕೈಯಲ್ಲಿ ನಾಗೇಂದ್ರ ಎಂಬ ಹೆಸರನ್ನು ಹಚ್ಚೆ ಹಾಕಿಸಿಕೊಂಡಿದ್ದರು. ಇಬ್ಬರ ಸ್ನೇಹ ಸಂಬಂಧ ನೋಡಿ ಗ್ರಾಮದವರೇ ಇವರನ್ನು ಆಪ್ತಮಿತ್ರರು ಎಂದೇ ಕರೆಯುತ್ತಿದ್ದರು. ನಾಗೇಂದ್ರರ ತಂದೆ- ತಾಯಿ ಕೆಲವು ದಿನಗಳ ಹಿಂದೆ ಸಾವನ್ನಪ್ಪಿದ್ದರು.

ಇದರಿಂದ ಬೇಸತ್ತ ನಾಗೇಂದ್ರ ನನಗೆ ಅಪ್ಪ ಅಮ್ಮ ಯಾರೂ ಇಲ್ಲ. ನಾನು ಜೀವನದಲ್ಲಿ ಬದುಕಿದ್ದರೂ ಸಹ ಪ್ರಯೋಜನವಿಲ್ಲ. ಬದುಕುವುದು ವ್ಯರ್ಥ ಎಂದು ಆಗಾಗ ಹೇಳುತ್ತಿದ್ದನಂತೆ‌. ಇದರಿಂದ ಬೇಸತ್ತು ಇಬ್ಬರೂ ಸಹ ಕೊಳ್ಳೇಗಾಲ ತಾಲೂಕಿನ ಲಕ್ಕರಸನ ಪಾಳ್ಯ ಗ್ರಾಮದ ರಸ್ತೆಯಲ್ಲಿ ಮದ್ಯದ ಜೊತೆಗೆ ವಿಷ ಸೇವಿಸಿದ್ದು, ರಸ್ತೆಯಲ್ಲಿಯೇ ಜೀವನ್ಮರಣದ ಮಧ್ಯೆ ಒದ್ದಾಡುತ್ತಿದ್ದರು. ಇದನ್ನು ನೋಡಿದ ಸ್ಥಳೀಯರು ನಗರದ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ‌. ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ನಾಗೇಂದ್ರ ಸಾವನ್ನಪ್ಪಿದ್ದಾನೆ. ಮನು ಚಿಂತಾಜನಕ ಸ್ಥಿತಿಯಲ್ಲಿದ್ದಾನೆ. ಈ ಸಂಬಂಧ ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: ಯುವತಿಯನ್ನು ಕಾರಿನಲ್ಲಿ ಸುತ್ತಾಡಿಸಿ ಕೊಂದು ಮ್ಯಾನ್‌ಹೋಲ್‌ಗೆಸೆದ ಅರ್ಚಕ: ಹೈದರಾಬಾದ್‌ನಲ್ಲೊಂದು ಭೀಕರ ಹತ್ಯೆ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.