ಗದಗ: ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯರಾದ ಹಿನ್ನೆಲೆ ಪಕ್ಷದ ವತಿಯಿಂದ ಗದಗನಲ್ಲಿ ಹಮ್ಮಿಕೊಳ್ಳಲಾದ ಕಾರ್ಯಕ್ರಮ ರದ್ದು ಮಾಡಿದ್ದೇವೆ. ಸ್ವಾಮೀಜಿ ಅಗಲಿಕೆಯನ್ನು ಭಕ್ತರಿಗೆ ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತ ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಶಾಸಕ ಜಮೀರ್ ಅಹ್ಮದ್ ಸಂತಾಪ ಸೂಚಿಸಿದರು.
ಸ್ವಾಮೀಜಿ ದರ್ಶನ ಮಾಡೋ ಪುಣ್ಯವನ್ನು ನಾನು ಪಡೆದುಕೊಂಡಿಲ್ಲ ಅನ್ನೋ ನೋವು ಆಗ್ತಿದೆ. ಸಿದ್ದೇಶ್ವರ ಸ್ವಾಮೀಜಿಗಳನ್ನು ನೋಡಲು ಹರಿದು ಬರುತ್ತಿರುವ ಜನ ಸಾಗರವನ್ನು ನಾನು ಎಂದೂ ನೋಡಿಲ್ಲ, ನನಗೆ ಸ್ವಾಮೀಜಿಗಳ ಬಗ್ಗೆ ಅಭಿಮಾನವಿದೆ ಎಂದರು.
ನಾನೂ ಕೂಡಾ ಸ್ವಾಮೀಜಿ ನೋಡೋಕೆ ಮೊನ್ನೆ ಸಿದ್ದರಾಮಯ್ಯ ಅವರೊಂದಿಗೆ ವಿಜಯಪುರಕ್ಕೆ ಹೋಗಬೇಕಿತ್ತು. ಆದರೆ ಕಾರಣಾಂತರಗಳಿಂದ ಹೋಗಲು ಸಾಧ್ಯವಾಗಲಿಲ್ಲ. ಅವರ ದರ್ಶನ ಮಾಡೋಕೂ ಪುಣ್ಯ ಮಾಡಿರಬೇಕು. ಆ ಪುಣ್ಯ ನಾನು ಪಡೆದುಕೊಂಡಿಲ್ಲ ಅನ್ನೋ ನೋವು ಆಗ್ತಿದೆ. ಮನೆಯಲ್ಲಿ ತಂದೆ-ತಾಯಿ ತೀರಿಕೊಂಡವರ ಹಾಗೆ ಜನ ಕಣ್ಣೀರು ಹಾಕ್ತಿದ್ದಾರೆ. ಅವರ ಅನುಯಾಯಿಗಳಿಗೆ ಭಗವಂತ ಸಹಿಸಿಕೊಳ್ಳುವ ಶಕ್ತಿ ಕೊಡಲಿ ಅಂತಾ ಪ್ರಾರ್ಥನೆ ಮಾಡುತ್ತೇನೆ ಎಂದು ಹೇಳಿದರು.
ಹಗರಿ ಬೊಮ್ಮನಹಳ್ಳಿಯಲ್ಲಿ ಕಾರ್ಯಕ್ರಮ ಇದ್ದು, ಸ್ವಾಮೀಜಿಗಳ ಅಂತ್ಯಕ್ರಿಯೆಗೆ ಹೋಗಲು ಪ್ರಯತ್ನ ಮಾಡುತ್ತೇನೆ ಎಂದು ಜಮೀರ್ ಅಹ್ಮದ್ ತಿಳಿಸಿದರು.
ಇದನ್ನೂ ಓದಿ: ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಭಕ್ತ ಸಾಗರ - ವಿಡಿಯೋ