ಮೈಸೂರು:ಲಘು ಹೃದಯಾಘಾತಕ್ಕೊಳಕ್ಕಾಗಿ ಚೇತರಿಸಿಕೊಂಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಅವರನ್ನು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಮಂಗಳವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಕೆ.ಆರ್.ನಗರ ತಾಲ್ಲೂಕಿನ ಅಡಗೂರು ಗ್ರಾಮದಲ್ಲಿರುವ ವಿಶ್ವನಾಥ್ ಅವರ ಮನೆಗೆ ಭೇಟಿ ನೀಡಿದ ವಿಜಯಶಂಕರ್ ಆರೋಗ್ಯ ವಿಚಾರಿಸಿ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಿ,ಚುನಾವಣೆ ಪ್ರಚಾರಕ್ಕೆ ಬರುವಂತೆ ಮನವಿ ಮಾಡಿದರು.
ತದನಂತರ ಕೆ.ಆರ್.ನಗರದಿಂದ ಮೈಸೂರಿಗೆ ಆಗಮಿಸಿದ ಹೆಚ್.ವಿಜಯಶಂಕರ್ , ವಿಜಯನಗರದಲ್ಲಿರುವ ಉನ್ನತ ಶಿಕ್ಷಣ ಸಚಿವ ಹಾಗೂ ಜೆಡಿಎಸ್ ಮುಖಂಡ ಜಿ.ಡಿ.ದೇವೇಗೌಡರನ್ನು ಭೇಟಿ ಮಾಡಿದರು. ಇದೇ ವೇಳೆ ಪ್ರಚಾರಕ್ಕೆ ಆಗಮಿಸುವಂತೆ ಮನವಿ ಮಾಡಿದರು.
ಹೆಚ್.ವಿಶ್ವನಾಥ್ 2009ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ವಿಜಯಶಂಕರ ಅವರನ್ನು ಸೋಲಿಸಿದರು.ಅದರೆ ಬದಲಾದ ರಾಜಕೀಯ ವಿದ್ಯಾಮಾನದಿಂದ ವಿಶ್ವನಾಥ್ ಜೆಡಿಎಸ್ ಸೇರ್ಪಡೆಗೊಂಡರೆ, ವಿಜಯಶಂಕರ್ ಕಾಂಗ್ರೆಸ್ ಸೇರ್ಪಡೆಗೊಂಡರು. 2019ರ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಧರ್ಮದಂತೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವುದಿಂದ ಎರಡು ಪಕ್ಷದ ಮುಖಂಡರು ಅಭ್ಯರ್ಥಿಗಳ ಪರ ಕೆಲಸ ಮಾಡುವ ಅನಿವಾರ್ಯತೆ ಎದುರಾಗಿದೆ.