ಹಾಸನ: ಸಹಪಾಠಿಗಳಿಂದ ನಿಂದನೆ ಹಿನ್ನೆಲೆ ಮನನೊಂದು ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ತಾಲೂಕಿನ ಹರುವನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹರ್ಷಿತ್ ಗೌಡ (16) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬಾಲಕ. ಹಾಸನ ತಾಲೂಕಿನ ಕಂಚಮಾರನಹಳ್ಳಿ ಬಳಿಯ ಖಾಸಗಿ ಶಾಲೆಯಲ್ಲಿ 10 ನೇ ತರಗತಿ ಓದುತ್ತಿದ್ದ. ಒಂದು ವರ್ಷದ ಹಿಂದೆ ಹರ್ಷಿತ್ಗೆ ಸ್ಟ್ರೋಕ್ ಆಗಿತ್ತು. ಶಾಲೆಯಲ್ಲಿ ಹರ್ಷಿತ್ ನನ್ನು ಸಹಪಾಠಿ ವಿದ್ಯಾರ್ಥಿಗಳು ರೇಗಿಸುತ್ತಿದ್ದರು ಎನ್ನಲಾಗಿದೆ. ಇದೇ ವಿಚಾರವಾಗಿ ಮಾ.19 ರಂದು ಶಾಲೆಯಲ್ಲಿ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿತ್ತು.
ಈ ವೇಳೆ, ವಿದ್ಯಾರ್ಥಿಗಳಿಗೆ ಶಿಕ್ಷಕರು ಬುದ್ಧಿಮಾತು ಹೇಳಿದ್ದರು. ಇದರಿಂದ ಬೇಸರಗೊಂಡು ಶಾಲೆ ಬಿಟ್ಟು ತನ್ನ ಊರಿಗೆ ಹೋಗಿದ್ದ ಎನ್ನಲಾಗಿದೆ. ಹರ್ಷಿತ್ ಜಾನುವಾರುಗಳನ್ನು ಮೇಯಿಸಲು ಹೋದಾಗ ಜಮೀನಿನ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ರಾಯಚೂರು: ಕಾರು ಪಲ್ಟಿಯಾಗಿ ಇಬ್ಬರಿಗೆ ಗಾಯ
ಸಹಪಾಠಿಗಳ ನಿಂದನೆ: ಮನನೊಂದು 10 ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ - ragging by classmates
ಸಹಪಾಠಿಗಳು ರೇಗಿಸುತ್ತಿದ್ದರೆಂಬ ಕಾರಣಕ್ಕೆ ಮನನೊಂದು 10 ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ತಾಲೂಕಿನ ಹರುವನಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.