ETV Bharat / state

ಹಾಸನ ಜಿಲ್ಲೆಯಲ್ಲಿಂದು 114 ಜನರಿಗೆ ಕೊರೊನಾ: ಆರೋಗ್ಯಾಧಿಕಾರಿ ಸತೀಶ್ - Hassan Corona News 2020

ಕೊರೊನಾ ಸೋಂಕು ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಯಾರಿಗಾದರೂ ಉಸಿರಾಟದಲ್ಲಿ ತೊಂದರೆ, ಜ್ವರ, ಶೀತ, ನೆಗಡಿ, ಕೆಮ್ಮು ಏನಾದರೂ ಇದ್ದರೆ ಹಿಮ್ಸ್ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು.

health-officer-satish
ಆರೋಗ್ಯಾಧಿಕಾರಿ ಸತೀಶ್
author img

By

Published : Oct 30, 2020, 4:34 PM IST

ಹಾಸನ: ಜಿಲ್ಲೆಯಲ್ಲಿ ಇಂದು ಹೊಸದಾಗಿ 114 ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಸೋಂಕಿತರ ಸಂಖ್ಯೆ 24,711ಕ್ಕೆ ಏರಿಕೆಯಾಗಿದೆ. ಮೃತರ ಸಂಖ್ಯೆ 422ಕ್ಕೆ ತಲುಪಿದೆ ಎಂದು ಆರೋಗ್ಯಾಧಿಕಾರಿ ಸತೀಶ್ ತಿಳಿಸಿದರು.

ಆರೋಗ್ಯಾಧಿಕಾರಿ ಸತೀಶ್ ಮಾತನಾಡಿದರು

ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅವರು, ಇಂದು ಬಿಡುಗಡೆಯಾದ 244 ಜನರು ಸೇರಿ ಈವರೆಗೆ 23,211 ಮಂದಿ ಗುಣಮುಖರಾಗಿದ್ದಾರೆ. 1078 ಸಕ್ರೀಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್‌ ಆಸ್ಪತ್ರೆ, ಕೋವಿಡ್‌ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ 39 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.

ತಾಲೂಕುವಾರು ಪ್ರಕರಣ: ಇಂದು ದಾಖಲಾಗಿರುವ ಪ್ರಕರಣಗಳಲ್ಲಿ ಆಲೂರು -7, ಅರಕಲಗೂಡು -7, ಅರಸೀಕೆರೆ - 18, ಬೇಲೂರು-9, ಚನ್ನರಾಯಪಟ್ಟಣ-24, ಹಾಸನ - 40, ಹೊಳೆನರಸೀಪುರ - 5, ಸಕಲೇಶಪುರ - 4, ಒಟ್ಟು 114 ಪಾಸಿಟಿವ್ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದರು.

ಆರೋಗ್ಯಧಿಕಾರಿ ಮನವಿ: ಕೊರೊನಾ ಸೋಂಕು ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಯಾರಿಗಾದರೂ ಉಸಿರಾಟದಲ್ಲಿ ತೊಂದರೆ, ಜ್ವರ, ಶೀತ, ನೆಗಡಿ, ಕೆಮ್ಮು ಏನಾದರೂ ಇದ್ದರೆ ಹಿಮ್ಸ್, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು.

ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ, ಉತ್ತಮ ದರ್ಜೆಯ ಮಾಸ್ಕ್ ಬಳಕೆ, ಸ್ಯಾನಿಟೈಸರ್ ಬಳಕೆ, ಸಭೆ ಸಮಾರಂಭವನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಕೊರೊನಾ ಸೋಂಕು ತಡೆಗಟ್ಟುವಲ್ಲಿ ಸಹಕರಿಸಬೇಕೆಂದು ಮನವಿ ಮಾಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.