ಹಾಸನ: ಜಿಲ್ಲೆಯಲ್ಲಿ ಇಂದು 154 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ನಾಲ್ವರು ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.
ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅವರು, ಶನಿವಾರ ದಾಖಲಾಗಿರುವ ಕೊರೊನಾ ಪ್ರಕರಣದಲ್ಲಿ ಆಲೂರು-1, ಅರಕಲಗೂಡು-28, ಅರಸೀಕೆರೆ-50, ಬೇಲೂರು-5, ಚನ್ನರಾಯಪಟ್ಟಣ-9, ಹಾಸನ-30, ಹೊಳೆನರಸೀಪುರ-22, ಸಕಲೇಶಪುರ-7, ಇತರೆ- 2 ಒಟ್ಟು 154 ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಇದುವರೆಗೂ ಜಿಲ್ಲೆಯಲ್ಲಿ ಒಟ್ಟು 4,426 ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.
ಇಂದು 124 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು 2,453 ಮಂದಿ ಬಿಡುಗಡೆಯಾಗಿದ್ದಾರೆ. 1849 ಸಕ್ರಿಯ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಹಾಗೂ 124 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದರು.
ಕೊರೊನಾ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಯಾರಿಗಾದರೂ ಉಸಿರಾಟದಲ್ಲಿ ತೊಂದರೆ, ಜ್ವರ, ಶೀತ, ನೆಗಡಿ, ಕೆಮ್ಮು ಏನಾದರೂ ಇದ್ದರೇ ಹಿಮ್ಸ್, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು. ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮತ್ತು ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡಿ, ಸಭೆ ಸಮಾರಂಭವನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಕೊರೊನಾ ಸೋಂಕು ತಡೆಗಟ್ಟುವಲ್ಲಿ ಸಹಕರಿಸಬೇಕೆಂದು ಮನವಿ ಮಾಡಿದರು.
ಜಿಲ್ಲೆಯ ತಾಲೂಕುವಾರು ಕೋವಿಡ್ ಪ್ರಕರಣಗಳು:
1. ಆಲೂರು - 115.
2. ಅರಕಲಗೂಡು 392.
3. ಅರಸೀಕೆರೆ 633.
4. ಬೆಲೂರು 308.
5. ಚನ್ನರಾಯಪಟ್ಟಣ 665.
6. ಹಾಸನ 1738.
7. ಹೊಳೆನರಸೀಪುರದಲ್ಲಿ 421.
8. ಸಕಲೇಶಪುರ 127.
ಇತರ 27 ಪ್ರಕರಣಗಳು ಈವರೆಗೆ ವರದಿಯಾಗಿದ್ದು, ಒಟ್ಟು 4426 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.