ETV Bharat / state

ಹಾಸನ ಜಿಲ್ಲೆಯಲ್ಲಿ 177 ಮಂದಿಗೆ ಸೋಂಕು ದೃಢ: 7 ಸಾವು

ಹಾಸನ ಜಿಲ್ಲೆಯಲ್ಲಿ ಇಂದು 177 ಜನರಗೆ ಕೊರೊನಾ ಸೋಂಕು ದೃಢವಾಗಿದ್ದು, 7 ಜನರು ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸತೀಶ್ ತಿಳಿಸಿದ್ದಾರೆ.

177 positive corona confirmed in hassan
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸತೀಶ್
author img

By

Published : Aug 18, 2020, 6:05 PM IST

ಹಾಸನ: ಜಿಲ್ಲೆಯಲ್ಲಿ 177 ಕೊರೊನಾ ಸೋಂಕು ದೃಢವಾಗಿದ್ದು, 7 ಜನರು ಮೃತಪಟ್ಟಿದ್ದಾರೆ ಎಂದು ಆರೋಗ್ಯಾಧಿಕಾರಿ ಡಾ.ಸತೀಶ್ ತಿಳಿಸಿದ್ದಾರೆ.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸತೀಶ್

ಇಂದು ಆಲೂರು ಹಾಗೂ ಅರಕಲಗೂಡು 9 ಪ್ರಕರಣ, ಅರಸೀಕೆರೆ 37, ಬೇಲೂರು 5, ಚನ್ನರಾಯಪಟ್ಟಣ 12, ಹಾಸನ 76, ಹೊಳೆನರಸೀಪುರ 21, ಸಕಲೇಶಪುರ 7, ಇತರೆ ಒಂದು ಪ್ರಕರಣ ಪತ್ತೆಯಾಗಿದೆ ಎಂದರು.

ಈವರೆಗೂ ಜಿಲ್ಲೆಯಲ್ಲಿ ಒಟ್ಟು 4,998ಕ್ಕೆ ಏರಿಕೆಯಾಗಿದೆ. ಇಂದು 133 ಜನರು ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೂ 3,170 ಮಂದಿ ಬಿಡುಗಡೆಯಾಗಿದ್ದಾರೆ. 1,685 ಸಕ್ರಿಯ ಪ್ರಕರಣಗಳು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಸೋಂಕಿನಿಂದ ಜಿಲ್ಲೆಯಲ್ಲಿ 143 ಜನರು ಸಾವನ್ನಪ್ಪಿದ್ದಾರೆ. ಕೊರೊನಾ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಉಸಿರಾಟದ ಸಮಸ್ಯೆ, ಜ್ವರ, ನೆಗಡಿ, ಕೆಮ್ಮು ಇಂತಹ ಲಕ್ಷಣಗಳು ಕಂಡು ಬಂದಲ್ಲಿ ಹಿಮ್ಸ್, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ, ನೀಡಿ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.

ಕಡ್ಡಾಯವಾಗಿ ಸಾಮಾಜಿಕ ಅಂತರ, ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡಿಬೇಕು. ಸಭೆ ಸಮಾರಂಭವನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಕೊರೊನಾ ಸೋಂಕು ತಡೆಗೆ ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡಿದರು.

ಜಿಲ್ಲೆಯ ತಾಲೂಕುವಾರು ಕೋವಿಡ್ ಪ್ರಕರಣಗಳು:
1. ಆಲೂರು - 139.
2. ಅರಕಲಗೂಡು 424.
3. ಅರಸೀಕೆರೆ 738.
4. ಬೆಲೂರು 380.
5. ಚನ್ನರಾಯಪಟ್ಟಣ 704.
7. ಹಾಸನ 2008.
8. ಹೊಳೆನರಸೀಪುರದಲ್ಲಿ 469.
9. ಸಕಲೇಶಪುರ 143.
10. ಇತರ 33 ಪ್ರಕರಣಗಳು ಈವರೆಗೆ ವರದಿಯಾಗಿದ್ದು, ಒಟ್ಟು 4998 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.