ಹಾಸನ: ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಕೋವಿಡ್ - 19 ಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.
ಸಕಲೇಶಪುರ ತಾಲೂಕಿನ 75 ವರ್ಷದ ಮಹಿಳೆ ಕಳೆದ ರಾತ್ರಿ 2.50 ಕ್ಕೆ ಕೊನೆಯುಸಿರೆಳೆದಿದ್ದಾರೆ. ತೀವ್ರ ಉಸಿರಾಟದ ತೊಂದರೆ ಹಾಗೂ ರಕ್ತದ ಒತ್ತಡದಿಂದ ಬಳಲುತ್ತಿದ್ದ ಅವರನ್ನು, ಹಾಸನದ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ ಎಂದು ಅವರು ತಿಳಿಸಿದರು.
ಜಿಲ್ಲೆಯಲ್ಲಿ ಇಂದು ಹೊಸದಾಗಿ 13 ಕೋವಿಡ್ -19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 454 ಕ್ಕೆ ಏರಿಕೆಯಾಗಿದೆ. ಈವರೆಗೆ 255 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 193 ಸಕ್ರಿಯ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 7 ಜನರಿಗೆ ಐಸಿಯುನಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ.
ಜಿಲ್ಲೆಯ ತಾಲೂಕುವಾರು ಕೋವಿಡ್ ಪ್ರಕರಣಗಳು:
1. ಆಲೂರು - 20
2. ಅರಕಲಗೂಡು - 21
3. ಅರಸೀಕೆರೆ - 48
4. ಬೆಲೂರು - 10
5. ಚನ್ನರಾಯಪಟ್ಟಣ - 215
6. ಹಾಸನ - 63
7. ಹೊಳೆನರಸೀಪುರದಲ್ಲಿ - 72
8. ಸಕಲೇಶಪುರ - 1
ಇನ್ನು ಇತರ 4 ಪ್ರಕರಣಗಳು ಈವರೆಗೆ ವರದಿಯಾಗಿದ್ದು, ಒಟ್ಟು 454 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.