ETV Bharat / state

ಹಾಸನದಲ್ಲಿಂದು 217 ಹೊಸ ಕೋವಿಡ್​ ಪ್ರಕರಣ ಪತ್ತೆ; 4 ಸಾವು - ಹಾಸನದಲ್ಲಿಂದು 217 ಹೊಸ ಪ್ರಕರಣ

ಹಾಸನದಲ್ಲಿಂದು 217 ಹೊಸದಾಗಿ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 13,959 ಕ್ಕೆ ಏರಿಕೆಯಾಗಿದೆ.

Hassan
Hassan
author img

By

Published : Sep 22, 2020, 6:23 PM IST

ಹಾಸನ: ಜಿಲ್ಲೆಯಲ್ಲಿ ಇಂದು ಹೊಸದಾಗಿ 217 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 13, 959 ಕ್ಕೆ ಏರಿಕೆಯಾಗಿದೆ. 4 ಸಾವಿನೊಂದಿಗೆ ಮೃತರ ಸಂಖ್ಯೆ 273 ತಲುಪಿದೆ ಎಂದು ಆರೋಗ್ಯಾಧಿಕಾರಿ ಸತೀಶ್ ತಿಳಿಸಿದ್ದಾರೆ.

ಹಾಸನ ಕೊರೊನಾ ಬಗ್ಗೆ ಮಾಹಿತಿ ನೀಡಿದ ಆರೋಗ್ಯಾಧಿಕಾರಿ

ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅವರು, ಇಂದು ಬಿಡುಗಡೆಯಾದ 315 ಜನರು ಸೇರಿ ಈವರೆಗೆ 11,138 ಮಂದಿ ಗುಣಮುಖರಾಗಿದ್ದಾರೆ. 2548 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್‌ ಆಸ್ಪತ್ರೆ, ಕೋವಿಡ್‌ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ 56 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಇಂದು ದಾಖಲಾಗಿರುವ ಕೊರೊನಾ ಪ್ರಕರಣದಲ್ಲಿ ಆಲೂರು-2, ಅರಕಲಗೂಡು-14, ಅರಸೀಕೆರೆ-20, ಬೇಲೂರು-20, ಚನ್ನರಾಯಪಟ್ಟಣ-64, ಹಾಸನ-63, ಹೊಳೆನರಸೀಪುರ-11, ಸಕಲೇಶಪುರ-23, ಇತರೆ- 0 ಒಟ್ಟು 217 ಪಾಸಿಟಿವ್ ಪ್ರಕರಣ ದಾಖಲಾಗಿವೆ.

ಕೊರೊನಾ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಯಾರಿಗಾದರೂ ಉಸಿರಾಟದಲ್ಲಿ ತೊಂದರೆ, ಜ್ವರ, ಶೀತ, ನೆಗಡಿ, ಕೆಮ್ಮು ಏನಾದರೂ ಇದ್ದರೇ ಹಿಮ್ಸ್, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು. ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮತ್ತು ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡಿ, ಸಭೆ ಸಮಾರಂಭವನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಕೊರೊನಾ ಸೋಂಕು ತಡೆಗಟ್ಟುವಲ್ಲಿ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲೆಯ ತಾಲೂಕುವಾರು ಕೋವಿಡ್ ಪ್ರಕರಣಗಳು:

1. ಆಲೂರು - 489.

2. ಅರಕಲಗೂಡು- 1,298.

3. ಅರಸೀಕೆರೆ - 1,771.

4. ಬೆಲೂರು - 1,010.

5. ಚನ್ನರಾಯಪಟ್ಟಣ 1,897.

7. ಹಾಸನ 5,867.

8. ಹೊಳೆನರಸೀಪುರ 1,044.

9. ಸಕಲೇಶಪುರ 501.

10. ಇತರ 82 ಪ್ರಕರಣಗಳು ಈವರೆಗೆ ವರದಿಯಾಗಿದ್ದು, ಒಟ್ಟು 13,959 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.