ಹಾಸನ: ರಾತ್ರಿ ಭೋಜನದ ಬಳಿಕ 25 ವಿದ್ಯಾರ್ಥಿಗಳು ವಾಂತಿ ಮಾಡಿಕೊಂಡು ಅಸ್ವಸ್ಥರಾದ ಘಟನೆ ಆಲೂರು ತಾಲೂಕಿನ ಕಿತ್ತೂರು ರಾಣಿ ಚೆನ್ನಮ್ಮ ಬಾಲಕಿಯರ ವಸತಿ ನಿಲಯದಲ್ಲಿ ನಡೆದಿದೆ. ತಕ್ಷಣ ಮಕ್ಕಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ನಂತರ ಹಾಸನದ ಶ್ರೀ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಗೆ ವರ್ಗಾಯಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.
ಆಹಾರ ಪದಾರ್ಥದ ಮಾದರಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಮಕ್ಕಳಿಗೆ ವಾಂತಿಯಾಗಿದೆ. ಗಂಭೀರ ಸಮಸ್ಯೆಗಳಿಲ್ಲ. ಯಾವುದೇ ಆತಂಕ ಬೇಡ ಎಂದು ವೈದ್ಯರು ತಿಳಿಸಿದ್ದಾರೆ. ಸ್ಥಳಕ್ಕೆ ತಹಶೀಲ್ದಾರ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ತಾಲೂಕು ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಹಾಸನದ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ ಶಂಕರ್ ಕೂಡ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಹೌರಾದಲ್ಲಿ ನಕಲಿ ಮದ್ಯ ಸೇವಿಸಿ 9 ಜನ ಸಾವು: ಹಲವರು ಅಸ್ವಸ್ಥ