ಹಾಸನ: ಜಿಲ್ಲೆಯಲ್ಲಿ ಇಂದು ಹೊಸದಾಗಿ 254 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 23,217 ಕ್ಕೆ ಏರಿಕೆಯಾಗಿದೆ. ಇಬ್ಬರ ಸಾವಿನೊಂದಿಗೆ ಮೃತರ ಸಂಖ್ಯೆ 396 ತಲುಪಿದೆ ಎಂದು ಆರೋಗ್ಯಾಧಿಕಾರಿ ಸತೀಶ್ ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ಇಂದು 429 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ 19,749 ಮಂದಿ ಗುಣಮುಖರಾಗಿದ್ದಾರೆ. 3,514 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್ ಆಸ್ಪತ್ರೆ, ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ 49 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.
ತಾಲೂಕುವಾರು ಪ್ರಕರಣಗಳ ವಿವರ:
ಇಂದು ದಾಖಲಾಗಿರುವ ಕೊರೊನಾ ಪ್ರಕರಣದಲ್ಲಿ ಆಲೂರು-6, ಅರಕಲಗೂಡು-18, ಅರಸೀಕೆರೆ-64, ಬೇಲೂರು-12, ಚನ್ನರಾಯಪಟ್ಟಣ-48, ಹಾಸನ-75, ಹೊಳೆನರಸೀಪುರ-13 ಹಾಗು ಸಕಲೇಶಪುರದಲ್ಲಿ -18 ಪ್ರಕರಣಗಳು ಸೇರಿ ಒಟ್ಟು 254 ಪಾಸಿಟಿವ್ ಪ್ರಕರಣಗಳು ಕಂಡುಬಂದಿವೆ.
![254 new cases of COVID-19 reported in Hassan](https://etvbharatimages.akamaized.net/etvbharat/prod-images/kn-hsn-18-01-sathish-speech-avb-ka10026_18102020140230_1810f_1603009950_333.png)
ಆರೋಗ್ಯಾಧಿಕಾರಿ ಮನವಿ:
ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಯಾರಿಗಾದರೂ ಉಸಿರಾಟದಲ್ಲಿ ತೊಂದರೆ, ಜ್ವರ, ಶೀತ, ನೆಗಡಿ, ಕೆಮ್ಮು ಲಕ್ಷಣಗಳು ಕಂಡುಬಂದರೆ ಹಿಮ್ಸ್, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು. ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮತ್ತು ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡಿ, ಸಭೆ, ಸಮಾರಂಭವನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟುವಲ್ಲಿ ಸಹಕರಿಸಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.